ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ಹಿರೇಮಠ ಕೊಲೆ ಪ್ರಕರಣ: ನಟ ರಿಷಬ್‌ ಶೆಟ್ಟಿ, ರಚಿತಾ ರಾಮ್‌ ಖಂಡನೆ

Published 20 ಏಪ್ರಿಲ್ 2024, 9:38 IST
Last Updated 20 ಏಪ್ರಿಲ್ 2024, 9:38 IST
ಅಕ್ಷರ ಗಾತ್ರ

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ನಟ ರಿಷಬ್‌ ಶೆಟ್ಟಿ ಮತ್ತು ನಟಿ ರಚಿತಾ ರಾಮ್‌ ಖಂಡಿಸಿದ್ದಾರೆ. 

‘ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೇ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ’ ಎಂದು ಇನ್‌ಸ್ಟಾಗ್ರಾಂನಲ್ಲಿ ರಚಿತಾ ಪೋಸ್ಟ್‌ ಮಾಡಿದ್ದಾರೆ.  

ರಿಷಬ್‌ ಶೆಟ್ಟಿ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ‘ನೇಹಾ ಹಿರೇಮಠ ಅವರ ಕೊಲೆ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ. #JusticeForNeha’ ಎಂದು ಉಲ್ಲೇಖಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT