ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಿಷಬ್‌ಗೆ ತೀರ್ಪುಗಾರರ ವಿಶೇಷ ಪ್ರಶಸ್ತಿ

Published 29 ನವೆಂಬರ್ 2023, 22:09 IST
Last Updated 29 ನವೆಂಬರ್ 2023, 22:09 IST
ಅಕ್ಷರ ಗಾತ್ರ

ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ(IFFI–ಇಫಿ) 54ನೇ ಆವೃತ್ತಿಯಲ್ಲಿ ‘ಕಾಂತಾರ’ ಚಿತ್ರಕ್ಕಾಗಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಗೆ ‘ತೀರ್ಪುಗಾರರ ವಿಶೇಷ ಪ್ರಶಸ್ತಿ’(ರಜತ ಮಯೂರ) ದೊರೆತಿದೆ. 

ಗೋವಾದ ಪಣಜಿಯಲ್ಲಿ ಮಂಗಳವಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಈ ಪ್ರಶಸ್ತಿಗೆ ಭಾಜನವಾಗಿದೆ. ಈ ಬಾರಿ ಅಂತರರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ 15 ಚಿತ್ರಗಳು ಕಣದಲ್ಲಿದ್ದವು. ಈ ಪೈಕಿ ಭಾರತದಿಂದ ‘ಕಾಂತಾರ’ ಸೇರಿದಂತೆ ಒಟ್ಟು ಮೂರು ಚಿತ್ರಗಳು ಸ್ಪರ್ಧೆಯಲ್ಲಿದ್ದವು. ಈ ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಮತ್ತು ₹15 ಲಕ್ಷ ನಗದು ಒಳಗೊಂಡಿದೆ.

ಶಂಕರ್‌ನಾಗ್‌ ಅವರಿಗೆ ಅರ್ಪಣೆ: ‘‘ಸ್ಪೆಷಲ್ ಜ್ಯೂರಿ ಅವಾರ್ಡ್’ ದೊರಕಿದ್ದು, ಎಂದೂ ಮರೆಯಲಾಗದ ಕ್ಷಣ. 1979ರಲ್ಲಿ ನನ್ನ ಸ್ಫೂರ್ತಿಯಾದ ಶಂಕರ್‌ನಾಗ್ ಅವರಿಗೆ ‘ಒಂದಾನೊಂದು ಕಾಲದಲ್ಲಿ’ ಚಿತ್ರಕ್ಕೆ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ದೊರಕಿತ್ತು. ಅವರು ತೋರಿಸಿರುವ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ನನಗೆ ಇಂದು ಈ ಪ್ರಶಸ್ತಿ  ದೊರೆತಿರುವುದು ಸಂತಸ ನೀಡಿದೆ. ಜನರ ಪ್ರಶಂಸೆ ಮತ್ತು ಬೆಂಬಲ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮತ್ತೊಮ್ಮೆ ಉತ್ತಮವಾದ ಚಿತ್ರವನ್ನು ನೀಡಲು ಶ್ರಮಿಸುತ್ತೇನೆ. ಈ ನನ್ನ ಎಲ್ಲ ಪ್ರಯತ್ನ ಹಾಗೂ ಯಶಸ್ಸಿಗೆ ಕಾರಣರಾದ ಪ್ರೀತಿಯ ಕನ್ನಡಿಗರಿಗೆ ನಾನು ಸದಾ ಆಭಾರಿ. ಈ ಪ್ರಶಸ್ತಿಯನ್ನು ನಾನು ಶಂಕರ್‌ನಾಗ್‌ ಅವರಿಗೆ ಅರ್ಪಿಸುತ್ತಿದ್ದೇನೆ’ ಎಂದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT