ಬೆಂಗಳೂರು: ರಿಷಭ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕಾಂತಾರ ಸಿನಿಮಾ ಆಸ್ಕರ್ ಪ್ರಶಸ್ತಿಯ ಎರಡು ವಿಭಾಗಗಳಿಗೆ ಸ್ಪರ್ಧಿಸಲು ಅರ್ಹತೆ ಗಳಿಸಿದೆ.
ಈ ಬಗ್ಗೆ ಸಿನಿಮಾ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.
'ಕಾಂತಾರ' ಚಿತ್ರ ಆಸ್ಕರ್ ಪ್ರಶಸ್ತಿಯ ಎರಡು ವಿಭಾಗಗಳಲ್ಲಿ ಸ್ಪರ್ಧಿಸಲು ಅರ್ಹತೆ ಗಳಿಸಿದೆ. ಈ ವಿಷಯ ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು’ ಎಂದು ಸಂಸ್ಥೆ ಹೇಳಿದೆ.
ಅಕಾಡೆಮಿ ಪ್ರಶಸ್ತಿಯ ‘ಅತ್ಯುತ್ತಮ ಚಿತ್ರ’ ಮತ್ತು ‘ಅತ್ಯುತ್ತಮ ನಟ’ ವಿಭಾಗಕ್ಕೆ ಕಾಂತಾರ ಸ್ಪರ್ಧಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿಂದೆ ಎಸ್‌ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಸಿನಿಮಾ ಆಸ್ಕರ್ ಪ್ರಶಸ್ತಿಗೆ ಸ್ಪರ್ಧಿಸಲು ಅರ್ಹತೆ ಗಳಿಸಿತ್ತು. ಈಗ ಕಾಂತಾರ ಚಿತ್ರ ಕೂಡ ಅರ್ಹತೆ ಪಡೆದಿದ್ದು, ಕನ್ನಡದ ಚಿತ್ರವೊಂದಕ್ಕೆ ಪ್ರಶಸ್ತಿ ಸಿಗಬಹುದೇ ಎಂಬ ನಿರೀಕ್ಷೆ ಮನೆ ಮಾಡಿದೆ.
ಅರ್ಹತೆ ಪಡೆದ ಕಾಂತಾರ, ವಿಕ್ರಾಂತ್ ರೋಣ
ಬೆಂಗಳೂರು: ಕನ್ನಡದ ‘ಕಾಂತಾರ’ ಮತ್ತು ‘ವಿಕ್ರಾಂತ್ ರೋಣ’ ಸಿನಿಮಾಗಳು ಆಸ್ಕರ್ ಪ್ರಶಸ್ತಿಗೆ ಸ್ಪರ್ಧಿಸಲು ಅರ್ಹತೆ ಪಡೆದ 301 ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ಜತೆಗೆ ಆರ್‌ಆರ್‌ಆರ್ ಚಿತ್ರದ ‘ನಾಟುನಾಟು’ ಹಾಡು, ವಿವಿಧ ಭಾಷೆಗಳ ಭಾರತೀಯ ಚಿತ್ರಗಳಾದ ‘ಗಂಗೂಬಾಯಿ ಕಾಠಿಯಾವಾಡಿ’, ‘ದಿ ಕಾಶ್ಮೀರ್ ಫೈಲ್ಸ್’, ‘ಮಿ. ವಸಂತರಾವ್, ‘ತುಜ್ಯಾ ಸಾಥಿ ಕಹೀ ಹಿ’, ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’, ‘ಇರವಿನ್ ನಿಳಲ್’ ಹಾಗೂ ಸಾಕ್ಷ್ಯಚಿತ್ರಗಳಾದ ‘ಆಲ್ ದಟ್ ಬ್ರೆಥ್ಸ್’ ಮತ್ತು ‘ದಿ ಎಲಿಫೆಂಟ್ ವಿಸ್ಪೆರರ್ಸ್’ ಸಹ ಸ್ಥಾನ ಪಡೆದಿವೆ.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.