ಕಾಂತಾರಕ್ಕೆ ಜಯ | ವರಾಹ ರೂಪಂ ಕೇಸ್ ಗೆದ್ದಿದ್ದೇವೆ: ರಿಷಬ್ ಶೆಟ್ಟಿ

ಜನಪ್ರಿಯ ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ ಎದುರಾದ ಅಡೆತಡೆ ನಿವಾರಣೆಯಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ದೈವಾನು ದೈವಗಳ ಆಶೀರ್ವಾದ ಹಾಗೂ ಜನರ ಅಭಿಮಾನದಿಂದ ವರಾಹ ರೂಪಂ ಕೇಸ್ ಗೆದ್ದಿದ್ದೇವೆ ಎಂದು ತಿಳಿಸಿದ್ದಾರೆ.
ಅಲ್ಲದೆ ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT ಫ್ಲ್ಯಾಟ್ಫಾರ್ಮ್ನಲ್ಲಿ ಹಾಡನ್ನು ಬದಲಾಯಿಸುವುದಾಗಿ ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ಕಾಂತಾರದ ‘ವರಾಹ ರೂಪಂ‘: ತೈಕುಡಂ ಬ್ರಿಡ್ಜ್ ಅರ್ಜಿ ತಳ್ಳಿಹಾಕಿದ ಕೇರಳ ಕೋರ್ಟ್
ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ . @VKiragandur@ChaluveG @AJANEESHB @Karthik1423 @hombalefilms @KantaraFilmhttps://t.co/STsNEyKmuT
— Rishab Shetty (@shetty_rishab) December 3, 2022
ಕೇರಳದ ಪ್ರಸಿದ್ಧ ಮ್ಯೂಸಿಕ್ ಬ್ಯಾಂಡ್ ತೈಕುಡಂ ಬ್ರಿಡ್ಜ್ ತಮ್ಮ 'ನವರಸಂ' ಆಲ್ಬಂನಲ್ಲಿರುವ ಹಾಡು ಮತ್ತದರ ಸಂಗೀತ ವರಾಹರೂಪಂ ಹಾಡಿಗೆ ಹೋಲಿಕೆಯಾಗುತ್ತಿದ್ದು, ಇದು ಕೃತಿಚೌರ್ಯ ಎಂದು ಆರೋಪಿಸಿತ್ತಲ್ಲದೆ ನ್ಯಾಯಾಲಯದ ಮೆಟ್ಟಿಲೇರಿತ್ತು.
ಬಳಿಕ ಅಮೇಜಾನ್ ಪ್ರೈಂ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾದಲ್ಲೂ ವರಾಹ ರೂಪಂ ಹಾಡನ್ನು ತೆಗೆದು ಹಾಕಲಾಗಿತ್ತು.
ಕೊನೆಗೂ ನ್ಯಾಯಾಲಯದಲ್ಲಿ ಕಾಂತಾರ ಹೋರಾಟಕ್ಕೆ ಜಯ ಸಿಕ್ಕಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.