ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆ.30ಕ್ಕೆ ‘ಲಾಫಿಂಗ್ ಬುದ್ಧ’ ತೆರೆಗೆ

Published 9 ಆಗಸ್ಟ್ 2024, 0:30 IST
Last Updated 9 ಆಗಸ್ಟ್ 2024, 0:30 IST
ಅಕ್ಷರ ಗಾತ್ರ

ರಿಷಬ್ ಶೆಟ್ಟಿ ನಿರ್ಮಿಸಿ, ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಆಗಸ್ಟ್‌ 30ರಂದು ತೆರೆಗೆ ಬರಲಿದೆ. ಚಿತ್ರದ ‘ಎಂಥಾ ಚಂದಾನೇ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.

ಭರತ್ ರಾಜ್ ನಿರ್ದೇಶನವಿದೆ. ಈ ಗೀತೆಗೆ ಕೆ.ಕಲ್ಯಾಣ್ ಸಾಹಿತ್ಯವಿದ್ದು, ವಿಷ್ಣು ವಿಜಯ್ ಸಂಗೀತ ನಿರ್ದೇಶನವಿದೆ. ‘ಭರತ್‌ ಈ ಹಿಂದೆ ನನ್ನ ‘ಹೀರೋ’ ಚಿತ್ರ ನಿರ್ದೆಶಿಸಿದ್ದರು. ಅವರು ಈ ಚಿತ್ರದ ಕಥೆ ಹೇಳಿದಾಗ ಮನಸ್ಸಿಗೆ ಹತ್ತಿರವಾಯಿತು. ಪೊಲೀಸ್ ಕುಟುಂಬ ಹಾಗೂ ಅವರ ಭಾವನೆಗಳ ಸುತ್ತ ಈ ಸಿನಿಮಾದ ಕಥೆ ಸಾಗುತ್ತದೆ’ ಎಂದರು ನಿರ್ಮಾಪಕ ರಿಷಬ್‌ ಶೆಟ್ಟಿ.

ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪೇದೆ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತೇಜು ಬೆಳವಾಡಿ ಸತ್ಯವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿಗಂತ್ ಮಂಚಾಲೆ ಕೂಡ ನಟಿಸಿದ್ದಾರೆ. ಭದ್ರಾವತಿ ಹಾಗೂ ಸುತ್ತಮುತ್ತಲ್ಲಿನ ಸ್ಥಳದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ‌.

‘ಚೀನಾ ದೇಶದಲ್ಲಿ ಬುದ್ಧ್ಯ ಎಂಬುವವನು ಒಂದು ಚೀಲದಲ್ಲಿ ಮಕ್ಕಳಿಗೆ ಬೇಕಾದ ಸಿಹಿ ಪದಾರ್ಥಗಳನ್ನು ತುಂಬಿಕೊಂಡು, ಮಕ್ಕಳನ್ನು ಹಾಗೂ ಎಲ್ಲರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ. ನಮ್ಮ ಚಿತ್ರದ ನಾಯಕ ಗೋವರ್ಧನ ಪಾತ್ರವು ಕೂಡ ಇದೇ ರೀತಿ. ಅದಕ್ಕಾಗಿ ಈ ಶೀರ್ಷಿಕೆ ಇಟ್ಟಿದ್ದೇವೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದರು.

ಕೆ.ಎಸ್ ಚಂದ್ರಶೇಖರ್ ಅವರ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಅವರ ಸಂಕಲನ‌ ಈ ಚಿತ್ರಕ್ಕಿದೆ.

ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ

ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT