ಮುಂಬೈ: ಬಾಲಿವುಡ್ ಜೋಡಿಗಳಾದ ರಿತೇಶ್ ದೇಶ್ಮುಖ್ ಹಾಗೂ ಪತ್ನಿ ಜೆನಿಲಿಯಾ ಅವರನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.

ರಿತೇಶ್ ಹಾಗೂ ಜೆನಿಲಿಯಾ ಅವರು ಮುಂದಿನ ಐದು ವರ್ಷಗಳ ಕಾಲ ಈ ಸಂಸ್ಥೆಯ ರಾಯಭಾರಿಗಳಾಗಿ ಸೇವೆ ಸಲ್ಲಿಸಲಿದ್ದಾರೆ. ಈ ಅವಧಿಯಲ್ಲಿ ಅವರು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಸಂಚಾರಿ ನಿಯಮಗಳ 'ಪಾಲನೆ ಮತ್ತು ಅಪಘಾತ ತಡೆಗಟ್ಟುವಿಕೆ ಕುರಿತು ಜಾಗೃತಿ ಮೂಡಿಸುವುದು', 'ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಅಭಿಯಾನಗಳಲ್ಲಿ' ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.

ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಏಕನಾಥ್ ಶಿಂದೆ, ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ರಿತೇಶ್ ದೇಶ್ಮುಖ್ ದಂಪತಿ ಸಹಿ ಹಾಕಿದ್ದಾರೆ.

2023ರಲ್ಲಿ ಖ್ಯಾತ ಮರಾಠಿ ನಟ ಮಕರಂದ್ ಅನಾಸ್ಪುರೆ ಅವರನ್ನು ಎಂ.ಎಸ್.ಆರ್.ಟಿ.ಸಿ ರಾಯಭಾರಿಯಾಗಿ ನೇಮಿಸಿತ್ತು. ರಸ್ತೆಗೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಅಷ್ಟಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಈಗ ರಿತೇಶ್ ದೇಶ್ಮುಖ್ ಜೋಡಿಯನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.