ಚಂದನವನದಲ್ಲಿ ಮಹಿಳಾ ನಿರ್ದೇಶಕರ ಸಾಲಿಗೆ ಮತ್ತೊಬ್ಬರು ಸೇರಿದ್ದಾರೆ. ಶಿಕ್ಷಕಿಯಾಗಿದ್ದ ವಿಜಯಾ ನರೇಶ್ ಅವರು ‘ರಿಯಾ’ ಚಿತ್ರಕ್ಕಾಗಿ ನಿರ್ದೇಶಕರ ಟೋಪಿ ಧರಿಸಿದ್ದಾರೆ.

ಆಂಧ್ರಪ್ರದೇಶದವರಾದ ವಿಜಯಾ ಅವರು ಮೊದಲ ಚಿತ್ರವನ್ನು ಕನ್ನಡ ಭಾಷೆಯಲ್ಲೇ ತರುತ್ತಿದ್ದಾರೆ. ಪತಿ ಕನಿಗೊಂಡ ನರೇಶ್ ಈ ಚಿತ್ರದ ನಿರ್ಮಾಪಕರು. ಹಾಡುಗಳು ಈಗಾಗಲೇ ಬಿಡುಗಡೆ ಆಗಿವೆ. ಹಾಡುಗಳ ಬಿಡುಗಡೆ ಸಮಾರಂಭ ರೇಣುಕಾಂಬ ಸ್ಟುಡಿಯೋದಲ್ಲಿ ನೆರವೇರಿತು.

ಚಿತ್ರದ ಕುರಿತು ಮಾತನಾಡಿದ ನಿರ್ದೇಶಕಿ ವಿಜಯಾ ನರೇಶ್ ‘ಹಾರರ್, ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳ ಕಥೆಯುಳ್ಳ ಚಿತ್ರ ‘ರಿಯಾ’. ಕನ್ನಡ ಹೆಚ್ಚಾಗಿ ಮಾತನಾಡಲು ಬಾರದ ನನಗೆ, ಚಿತ್ರ ಯಾವುದೇ ತೊಂದರೆ ಇಲ್ಲದೇ ಸಿದ್ದವಾಗಲು ಸಹಕರಿಸಿದ ಎಲ್ಲರಿಗೂ ಧನ್ಯವಾದ’ ಎಂದರು.

ಸಾವಿತ್ರಿ ಚಿತ್ರದಲ್ಲಿ ನಾಯಕಿ, ಅನನ್ಯಾ, ವಿಕಾಸ್ ಕುಲಕರ್ಣಿ, ರಣ್ವೀರ್, ಶ್ವೇತ ಚಿತ್ರದ ತಾರಾಗಣದಲ್ಲಿದ್ದಾರೆ. ಹೇಮಂತ್, ಸಮರ್ಥ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಎ.ಟಿ.ರವೀಶ ಹಿನ್ನೆಲೆ ಸಂಗೀತ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.