ಸೋಮವಾರ, ಮೇ 10, 2021
19 °C

ಸದ್ಯಕ್ಕಿಲ್ಲ ರಾಬರ್ಟ್‌ ವಿಜಯ ಯಾತ್ರೆ: ದರ್ಶನ್‌ ಟ್ವೀಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳ ಆಗುತ್ತಿರುವ ಕಾರಣದಿಂದಾಗಿ, ರಾಬರ್ಟ್‌ ಚಿತ್ರತಂಡವು ತನ್ನ ವಿಜಯ ಯಾತ್ರೆಯನ್ನು ಮುಂದೂಡಿದೆ.

ಈ ಕುರಿತು ಸ್ವತಃ ದರ್ಶನ್‌ ಅವರೇ ಟ್ವೀಟ್‌ ಮಾಡಿದ್ದು, ‘ನೀವು ನಮ್ಮ ಚಿತ್ರಕ್ಕೆ ಅಪಾರ ಬೆಂಬಲವನ್ನು ನೀಡಿ ದೊಡ್ಡ ಮಟ್ಟದ ಯಶಸ್ಸಿಗೆ ಕಾರಣರಾಗಿದ್ದೀರಿ. ಅದಕ್ಕೆಂದೇ ವಿಜಯಯಾತ್ರೆ ಮೂಲಕ ನಿಮ್ಮ ಊರಿಗೆ ಬಂದು ಧನ್ಯವಾದಗಳು ಸಲ್ಲಿಸಬೇಕೆಂದು ವೇಳಾಪಟ್ಟಿ ಸಿದ್ಧಪಡಿಸಿಕೊಂಡಿದ್ದೆವು. ಕೊರೊನಾ ಎರಡನೇ ಅಲೆ ಕಾರಣ, ಎಲ್ಲೆಡೆ ಹೋಗಲು ಅನುಮತಿ ಸಿಗುವುದು ಕಷ್ಟವಾಗಿದೆ. ನಿಮ್ಮ ಆರೋಗ್ಯವೇ ನಮ್ಮ ಹಾಗೂ ಸರ್ಕಾರದ ಮೊದಲ ಆದ್ಯತೆ. ದಯಮಾಡಿ ಮಾಸ್ಕ್ ಧರಿಸಿ ನಿಮ್ಮ ಜಾಗೃತೆಯಲ್ಲಿರಿ. ಈಗಿನ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ನಾವು ಖಂಡಿತ ನಿಮ್ಮ ಊರಿಗೆ ಆಗಮಿಸುತ್ತೇವೆ. ನಿಮ್ಮ ಪ್ರೀತಿ-ವಿಶ್ವಾಸ ಸದಾ ಹೀಗೆ ಇರಲಿ– ಇಂತಿ ನಿಮ್ಮ ಪ್ರೀತಿಯ ದಾಸ’ ಎಂದು ಉಲ್ಲೇಖಿಸಿದ್ದಾರೆ.

ವಿಜಯ ಯಾತ್ರೆ ಮಾರ್ಚ್‌ 29ರಂದು ತುಮಕೂರಿನಿಂದ ಆರಂಭವಾಗಬೇಕಿತ್ತು. ಇದಕ್ಕಾಗಿ ವೇಳಾಪಟ್ಟಿಯನ್ನೂ ಪ್ರಕಟಿಸಿದ್ದ ಚಿತ್ರತಂಡ ನಾಲ್ಕು ದಿನಗಳ ಕಾಲ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಶಿವಮೊಗ್ಗ, ಹಾಸನ, ತಿಪಟೂರು, ಗುಂಡ್ಲುಪೇಟೆ, ಮೈಸೂರು, ಮಂಡ್ಯ ಮತ್ತು ಮದ್ದೂರಿನಲ್ಲಿ ಅಭಿಮಾನಿಗಳನ್ನು ಭೇಟಿಯಾಗಲು ಈ ಹಿಂದೆ ನಿರ್ಧರಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು