ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಕಿಂಗ್ ಸ್ಟಾರ್ ಯಶ್‌ಗೆ ಇಂದು 36 ನೇ ಜನ್ಮದಿನದ ಸಂಭ್ರಮ

Last Updated 8 ಜನವರಿ 2022, 5:14 IST
ಅಕ್ಷರ ಗಾತ್ರ

ಬೆಂಗಳೂರು:ಕೆಜಿಎಫ್‌ ಸಿನಿಮಾ ಮೂಲಕ ಭಾರತಾದ್ಯಂತ ಅಪಾರ ಅಭಿಮಾನಿಗಳನ್ನು ಸಂಪಾದನೆ ಮಾಡಿದ ನಟ 'ರಾಕಿಂಗ್ ಸ್ಟಾರ್' ಯಶ್ ಅವರಿಗೆ ಇಂದು (ಜ.8) 36ನೇ ವರ್ಷದ ಜನ್ಮದಿನಸಂಭ್ರಮ.

ಯಶ್‌ಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಭಿಮಾನಿಗಳು ಮತ್ತು ಚಿತ್ರರಂಗ ಗಣ್ಯರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಕೆಜಿಎಫ್ ಸಿನಿಮಾ ನಿರ್ದೇಶಕ ಪ್ರಶಾಂತ್ ನೀಲ್ ಅವರು ಯಶ್‌ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ ಕೆಜಿಎಫ್ ಚಾಫ್ಟರ್ 2 ಸಿನಿಮಾದ ವಿಶೇಷ ಪೋಸ್ಟರ್ ಒಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವಿಟರ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಟ್ರೆಂಡ್ ಆಗಿದ್ದಾರೆ.

1986 ಜನವರಿ 8 ರಂದು ಹಾಸನ ಜಿಲ್ಲೆಯ ಭುವನಹಳ್ಳಿಯಲ್ಲಿ ಜನಿಸಿದ ಯಶ್ ಅವರ ಮೊದಲ ಹೆಸರು ನವೀನ್ ಕುಮಾರ್ ಗೌಡ. ಅಭಿನಯ, ನಾಟಕದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಅವರು ಮೊದಲು ಧಾರವಾಹಿಗಳಲ್ಲಿ ಗುರುತಿಸಿಕೊಂಡು ನಂತರ ಕನ್ನಡ ಚಿತ್ರರಂಗದಲ್ಲಿ ಮಿಂಚಿ ‘ಯಶ್‌’ ಆದರು. ಕೆಜಿಎಫ್ ಚಾಫ್ಟರ್ 1 ಮೂಲಕ ಅವರು ಇಡೀ ಭಾರತೀಯ ಚಿತ್ರರಂಗದ ಸ್ಟಾರ್ ನಟ ಎನಿಸಿಕೊಂಡಿದ್ದಾರೆ.

ಕೊರೊನಾಕ್ಕೂ ಮುನ್ನ ಯಶ್‌ ಅಭಿಮಾನಿಗಳು ಅದ್ಧೂರಿಯಾಗಿ ಅವರ ಹುಟ್ಟುಹಬ್ಬ ಆಚರಿಸಿದ್ದರು. ಆದರೆ ಕಳೆದ ವರ್ಷ ಹಾಗೂ ಈ ವರ್ಷ ಯಶ್‌ ಬರ್ತಡೇಯನ್ನು ಸಾರ್ವಜನಿಕವಾಗಿ ಆಚರಿಸಲು ಅಭಿಮಾನಿಗಳಿಗೆ ಅವಕಾಶ ಸಿಕ್ಕಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಯಶ್ ಅವರು ದೂರದಿಂದಲೇ ಶುಭಾಶಯ ತಿಳಿಸಿ ಎಂದು ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳು ಶುಭಾಶಯಗಳನ್ನು ಹೇಳುತ್ತಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ಯಶ್‌ ಅಭಿಮಾನಿಗಳು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT