2023ರ ಡಿಸೆಂಬರ್ 8ರಂದು ‘ಟಾಕ್ಸಿಕ್’ ಸಿನಿಮಾ ಶೀರ್ಷಿಕೆ ಘೋಷಣೆಯಾಗಿತ್ತು. ಇದಾದ ಬಳಿಕ ಬೆಂಗಳೂರಿನ ಎಚ್‌ಎಂಟಿ ಮೈದಾನದಲ್ಲಿ ಚಿತ್ರದ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್‌ಗಳ ನಿರ್ಮಾಣ ಆರಂಭವಾಗಿತ್ತು. ಇಲ್ಲೇ ಮುಹೂರ್ತವೂ ನಡೆದಿದೆ. ಶೀರ್ಷಿಕೆ ಘೋಷಣೆಯಾಗಿ ಎಂಟು ತಿಂಗಳ ಬಳಿಕ ಚಿತ್ರದ ಶೂಟಿಂಗ್ ಆರಂಭವಾಗಿದೆ. ‘A fairy tale for grown-ups’ ಎಂಬ ಅಡಿಬರಹವಿರುವ ಈ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣ ಮಾಡುತ್ತಿದೆ. 2025ರ ಏಪ್ರಿಲ್ 10ರಂದು ಸಿನಿಮಾ ಬಿಡುಗಡೆಯಾಗಲಿದೆ ಎಂದು ಈಗಾಗಲೇ ಘೋಷಿಸಲಾಗಿದ್ದು, ಎಂಟು ತಿಂಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಸಾಧ್ಯವೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.