ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.8ರಂದು ಹೊಸ ಸಿನಿಮಾ ಶೀರ್ಷಿಕೆ ಅನೌನ್ಸ್ ಮಾಡ್ತೀವಿ: ರಾಕಿಂಗ್ ಸ್ಟಾರ್ ಯಶ್

Published 4 ಡಿಸೆಂಬರ್ 2023, 6:29 IST
Last Updated 4 ಡಿಸೆಂಬರ್ 2023, 6:29 IST
ಅಕ್ಷರ ಗಾತ್ರ

ಬೆಂಗಳೂರು: ನಟ, ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಹೊಸ ಸಿನಿಮಾ ಕುರಿತು ಮಾಹಿತಿ ನೀಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

2022ರ ಏಪ್ರಿಲ್‌ನಲ್ಲಿ ‘ಕೆಜಿಎಫ್ –2’ ಸಿನಿಮಾ ಬಿಡುಗಡೆಯಾಗಿತ್ತು. ಇದಾದ ಬಳಿಕ ಯಶ್ ಅವರ ಮುಂದಿನ ಚಿತ್ರ ಯಾವುದು ಎನ್ನುವ ಪ್ರಶ್ನೆ ಮೂಡಿತ್ತು. ಆದರೆ, ಹೊಸ ಸಿನಿಮಾ ಕುರಿತು ಇತ್ತೀಚೆಗೆ ಮಾತನಾಡಿದ್ದ ಅವರು, ಶೀಘ್ರವೇ ಮಾಹಿತಿ ನೀಡುವುದಾಗಿ ಹೇಳಿದ್ದರು. ಇದೀಗ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

‘ಈಗ ಸಮಯ ಬಂದಿದೆ. ಡಿಸೆಂಬರ್ 8ರಂದು ಮುಂಜಾನೆ 9:55ಕ್ಕೆ ಟೈಟಲ್ ಅನೌನ್ಸ್ ಆಗಲಿದೆ’ ಎಂದು ‘ಎಕ್ಸ್‌’ನಲ್ಲಿ ಯಶ್ ಪೋಸ್ಟ್‌ ಮಾಡಿದ್ದಾರೆ. ಈ ಚಿತ್ರವನ್ನು ಕೆವಿಎನ್​ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ಈ ಪೋಸ್ಟರ್​ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

‘ಯಶ್ 19’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಹಾಲಿವುಡ್ ತಂತ್ರಜ್ಞರು ಕೂಡ ಈ ಚಿತ್ರಕ್ಕಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ಎಲ್ಲಾ ಪ್ರಶ್ನೆಗೆ ಡಿ.8ರಂದು ಉತ್ತರ ಸಿಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT