ಮುಂಬೈ: ಮುಂಬೈನ ಜುಹುನಲ್ಲಿರುವ ಬಾಲಿವುಡ್ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆಯ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ.

ಭಾನುವಾರ ಬೆಳಗಿನ ಜಾವ ಅಪರಿಚಿತರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೋಹಿತ್ ಅವರ ಮನೆಯ ಬಾಲ್ಕನಿಯಲ್ಲಿನ ಗಾಜು ಬಿರುಕು ಬಿಟ್ಟಿದೆ.

‘ಘಟನೆ ಬಳಿಕ ಮನೆಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ಹೊರಗಿನಿಂದ ಮನೆಯ ಮೇಲೆ ಅಪರಿಚಿತರು ಗುಂಡು ಹಾರಿಸಿದ್ದು, ವಲಯ ಪೊಲೀಸರು ಮತ್ತು ಅಪರಾಧ ವಿಭಾಗದ ತಂಡ ತನಿಖೆ ನಡೆಸುತ್ತಿವೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ರೋಹಿತ್ ಶೆಟ್ಟಿ ನಿರ್ದೇಶನದ 'ಇಂಡಿಯನ್ ಪೊಲೀಸ್ ಫೊರ್ಸ್'ನಲ್ಲಿ ವಿವೇಕ್ ಒಬೆರಾಯ್.
‘ಗುಂಡು ಹಾರಿಸಿದ ಸಂದರ್ಭದಲ್ಲಿ ರೋಹಿತ್ ಶೆಟ್ಟಿ ಅವರು ಮನೆಯಲ್ಲಿ ಇದ್ದರೋ ಇಲ್ಲವೋ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ’ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರಂಭಿಕ ವರದಿಗಳ ಪ್ರಕಾರ, ಯಾರಿಗೂ ಗಾಯಗಳಾಗಿಲ್ಲ. ಪ್ರಕರಣ ಕುರಿತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ’ ಎಂದು ವರದಿಯಾಗಿದೆ.

ಸದ್ಯ ರೋಹಿತ್ ಅವರ ಮನೆಯ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಈ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಎದುರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು ಸುದ್ದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.