ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಧಿಪತ್ರ’ದ ಮೂಲಕ ಮತ್ತೆ ಬೆಳ್ಳಿ ತೆರೆಗೆ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

Published 15 ಆಗಸ್ಟ್ 2023, 23:42 IST
Last Updated 15 ಆಗಸ್ಟ್ 2023, 23:42 IST
ಅಕ್ಷರ ಗಾತ್ರ

ಬಿಗ್‌ಬಾಸ್ ವಿಜೇತ, ರಾಕ್‌ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ತುಳು ಸಿನಿಮಾ ಇಂಡಸ್ಟ್ರಿಯಲ್ಲಿ ನಟನಾಗಿ, ನಿರ್ದೇಶಕನಾಗಿ ಮಿಂಚಿದವರು. ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ ಕೆಲ ಸಿನಿಮಾಗಳಲ್ಲಿ ಬಣ್ಣಹಚ್ಚಿರುವ ರೂಪೇಶ್‌, ‘ಅಧಿಪತ್ರ’ ಎನ್ನುವ ಸಿನಿಮಾ ಮೂಲಕ ಮತ್ತೊಮ್ಮೆ ಸಿಲ್ವರ್‌ಸ್ಕ್ರೀನ್‌ ಮೇಲೆ ಬರುತ್ತಿದ್ದಾರೆ. 

ರೂಪೇಶ್‌ ಅವರ ಜನ್ಮದಿನದಂದು ಚಿತ್ರದ ಶೀರ್ಷಿಕೆ ಘೋಷಣೆಯಾಗಿದೆ. ‘ಡೇಂಜರ್ ಝೋನ್’, ‘ನಿಶ್ಯಬ್ದ-2’, ‘ಅನುಷ್ಕಾ’, ‘ಮಂಕು ಭಾಯ್‌ ಫಾಕ್ಸಿ ರಾಣಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ರೂಪೇಶ್‌ ನಟಿಸಿದ್ದು, ಈಗ ‘ಅಧಿಪತ್ರ‌’ ಮೂಲಕ ಹೊಸ ಬಗೆಯ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರಲಿದ್ದಾರೆ.

ತಮ್ಮ ನಿರ್ದೇಶನದ ತುಳು ಸಿನಿಮಾ ‘ಸರ್ಕಸ್‌’ 50 ದಿನ ಪೂರೈಸಿರುವ ಸಂದರ್ಭದಲ್ಲೇ ಹೊಸ ಪ್ರಾಜೆಕ್ಟ್‌ ಕೈಗೆತ್ತಿಕೊಂಡಿದ್ದಾರೆ ರೂಪೇಶ್‌. ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಇರುವ ಚಯನ್ ಶೆಟ್ಟಿ ‘ಅಧಿಪತ್ರ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ. ಕೆ.ಆರ್. ಸಿನಿಕಂಬೈನ್ಸ್ ಬ್ಯಾನರ್‌ನಡಿಯಲ್ಲಿ ತಯಾರಾಗುತ್ತಿರುವ ‘ಅಧಿಪತ್ರ’ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ.

ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಈ ಸಿನಿಮಾವನ್ನು ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ‘ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಉಳಿದ ತಾರಾಗಣ ಹಾಗೂ ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗುವುದು’ ಎಂದಿದೆ ಚಿತ್ರತಂಡ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT