ಶುಕ್ರವಾರ, ಮೇ 20, 2022
25 °C

ಫೆ. 11ಕ್ಕೇ ಬರುತ್ತಾಳಂತೆ ‘ರೌಡಿ ಬೇಬಿ’: ದಿವ್ಯ ಸುರೇಶ್, ರವಿಗೌಡ ಸಿನಿಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಫೆಬ್ರವರಿ 14ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ. ಈ ಸಂದರ್ಭದಲ್ಲಿ ಎಸ್.ಎಸ್. ರವಿಗೌಡ ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ನಾಯಕ -ನಾಯಕಿಯಾಗಿ ಅಭಿನಯಿಸಿರುವ ‘ರೌಡಿ ಬೇಬಿ’ ಚಿತ್ರ ತೆರೆಗೆ ಬರಲಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ವಾರ್‌ಫುಟ್‌ ಸ್ಟುಡಿಯೋಸ್‌ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಏಪುರು ಕೃಷ್ಣ ನಿರ್ದೇಶನ ಮಾಡಿದ್ದಾರೆ. ಸಾಮ್ರಾಟ್ ಛಾಯಾಗ್ರಹಣ, ಅಭಿಷೇಕ್ ಹಿನ್ನೆಲೆ ಸಂಗೀತ, ಅರ್ಮಾನ್ ಮೆರುಗು ಸಂಗೀತ ನಿರ್ದೇಶನ ಹಾಗೂ ವೆಂಕಿ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

ಎಸ್ ಎಸ್ ರವಿಗೌಡೇ ಅವರಿಗೆ ದಿವ್ಯ ಸುರೇಶ್ ಹಾಗೂ ಹೀರಾ ಕೌರ್ ನಾಯಕಿಯರಾಗಿ ನಟಿಸಿದ್ದಾರೆ. ಅಮಿತ್, ಕೆಂಪೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು