ಶನಿವಾರ, ಜೂನ್ 19, 2021
23 °C

ಲಾಕ್‌ಡೌನ್‌ ಬಳಿಕ ‘ರೌಡಿ ಬೇಬಿ’ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡು, ಜನಪ್ರಿಯರಾಗಿರುವ ದಿವ್ಯಾ ಸುರೇಶ್ ಅಭಿನಯದ ‘ರೌಡಿ ಬೇಬಿ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದ ಮೊದಲ ಲಿರಿಕಲ್ ವಿಡಿಯೊ ಹಾಡನ್ನು ಬುಧವಾರ A2 ಮ್ಯೂಸಿಕ್ ಮೂಲಕ ಬಿಡುಗಡೆಗೊಳಿಸಲಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರೆಡ್ಡಿ ಕೃಷ್ಣ ನಿರ್ದೇಶಿಸಿದ್ದಾರೆ. ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವವಿರುವ ರೆಡ್ಡಿ ಕೃಷ್ಣ ಅವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ. ಲಾಕ್‌ಡೌನ್ ಮುಕ್ತಾಯದ ಬಳಿಕ ಚಿತ್ರದ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ. 32 ದಿನ ಬೆಂಗಳೂರು, ಕೇರಳ ಹಾಗೂ ಮಂಗಳೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ವಾರ್‌ಫುಟ್ ಸ್ಟುಡಿಯೋ ಹಾಗೂ ಸುಮುಖ ಎಂಟರ್‌ಟೈನರ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಅರಮಾನ್ ಹಾಗೂ ಅಭಿಷೇಕ್ ರಫಸ್ ಸಂಗೀತ ನಿರ್ದೇಶನ, ಸಾಮ್ರಾಟ್ ಛಾಯಾಗ್ರಹಣ, ವೆಂಕಿ ಯು.ಡಿ.ವಿ ಸಂಕಲನ ಹಾಗೂ ಚಂದ್ರು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳನ್ನು ಡಾ.ವಿ.ನಾಗೇಂದ್ರ ಪ್ರಸಾದ್, ಸಿಂಪಲ್ ಸುನಿ ಹಾಗೂ ಕಿನಾಲ್ ರಾಜ್ ಬರೆದಿದ್ದಾರೆ. ಎಸ್.ಎಸ್.ರವಿಗೌಡ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯರು ದಿವ್ಯಾ ಸುರೇಶ್ ಹಾಗೂ ಹೀರ್‌ಕೌರ್. ಅಮಿತ್, ಕೆಂಪೇಗೌಡ, ಅರುಣಾ ಬಾಲರಾಜ್, ಶ್ರೀನಾಥ್ ವಸಿಷ್ಠ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು