ಭಾನುವಾರ, ಏಪ್ರಿಲ್ 2, 2023
23 °C

ಟೀಮ್ ಇಂಡಿಯಾ ಆಟಗಾರರನ್ನು ಭೇಟಿಯಾದ ಆರ್‌ಆರ್‌ಆರ್‌ ಖ್ಯಾತಿಯ ಜ್ಯೂ.ಎನ್‌ಟಿಎರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಹೈದರಾಬಾದ್: ‘ಆರ್‌ಆರ್‌ಆರ್‌’ ಖ್ಯಾತಿ ಜ್ಯೂನಿಯರ್ ಎನ್‌ಟಿಆರ್ ಅವರು ಮಂಗಳವಾರ ಟೀಮ್ ಇಂಡಿಯಾ ಆಟಗಾರರನ್ನು ಭೇಟಿಯಾಗಿದ್ದಾರೆ. 

ವಿದೇಶದಿಂದ ಹೈದರಾಬಾದ್​ಗೆ ಮರಳಿರುವ ಎನ್​ಟಿಆರ್, ಟೀಂ ಇಂಡಿಯಾ ಆಟಗಾರರಾದ ಯಜುವೇಂದ್ರ ಚಾಹಲ್, ಶುಭಮನ್​ ಗಿಲ್, ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಶಾರ್ದೂಲ್ ಠಾಕೂರ್ ಅವರನ್ನು ಭೇಟಿಯಾಗುವ ಮೂಲಕ ಗಮನ ಸೆಳೆದಿದ್ದಾರೆ. 

ಇದೀಗ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಹರಿದಾಡುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಹೈದರಾಬಾದ್​ನಲ್ಲಿ ಜ.18ರಂದು (ಬುಧವಾರ) ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದೆ. ಹಾಗಾಗಿ ಟೀಮ್ ಇಂಡಿಯಾ ಆಟಗಾರರು ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದಾರೆ. 

ಸದ್ಯ ಎಸ್‌.ಎಸ್‌.ರಾಜಮೌಳಿ ನಿರ್ದೇಶನ ‘ಆರ್‌ಆರ್‌ಆರ್‌’ ಚಿತ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಸಿನಿಮಾ ಗೋಲ್ಡನ್ ಗ್ಲೋಬ್ಸ್ ಹಾಗೂ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್​​ನಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

ಎನ್‌ಟಿಆರ್ ‘ಆರ್‌ಆರ್‌ಆರ್‌’ನಲ್ಲಿ ಕೊಮರಂ ಭೀಮ್ ಪಾತ್ರದಲ್ಲಿ ಪ್ರೇಕ್ಷಕರ ಮನ ಗೆದ್ದಿದ್ದರು. 

ಜೂ. ಎನ್‌ಟಿಆರ್ ಮುಖ್ಯ ಭೂಮಿಕೆಯಲ್ಲಿರುವ 'ಎನ್‌ಟಿಆರ್ 30' ಚಿತ್ರ ಫೆಬ್ರುವರಿಯಲ್ಲಿ ಸೆಟ್ಟೇರಲು ಸಿದ್ಧವಾಗಿದೆ. ಇನ್ನೂ ಹೆಸರಿಡದ ಚಿತ್ರ, 2024 ರ ಏಪ್ರಿಲ್‌ನಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಜೂ.ಎನ್‌ಟಿಆರ್‌ ಅವರ ಬಹು ನಿರೀಕ್ಷಿತ ಚಿತ್ರಕ್ಕೆ ಕೊರಟಾಲ ಶಿವ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಇವನ್ನೂ ಓದಿ... 

ನೇಪಾಳ ವಿಮಾನ ದುರಂತ: ಘಟನೆಗೂ ಮುನ್ನ ಟಿಕ್‌ ಟಾಕ್ ವಿಡಿಯೊ ಮಾಡಿದ್ದ ಗಗನಸಖಿ! 

‘ದಿ ವ್ಯಾಕ್ಸಿನ್ ವಾರ್’ ಸೆಟ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಪತ್ನಿ ಪಲ್ಲವಿಗೆ ಗಾಯ 

ವಿಡಿಯೊ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು