ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ಎಸ್‌. ರಾಜಮೌಳಿ ನಿರ್ದೇಶನದ 'ಆರ್‌ಆರ್‌ಆರ್‌’ ಬಿಡುಗಡೆ ಮುಂದೂಡಿಕೆ?

Last Updated 8 ಮೇ 2020, 8:53 IST
ಅಕ್ಷರ ಗಾತ್ರ

ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’(ರೌದ್ರಂ ರಣಂ ರುಧಿರಂ) ಚಿತ್ರ ಸಿನಿಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಡಿ.ವಿ.ವಿ. ದಾನಯ್ಯ ಬಂಡವಾಳ ಹೂಡಿರುವ ಇದರ ಚಿತ್ರೀಕರಣ ಶೇಕಡ 80ರಷ್ಟು ಪೂರ್ಣಗೊಂಡಿದೆಯಂತೆ.

ಈ ವರ್ಷದ ಜುಲೈನಲ್ಲಿಯೇ ಸಿನಿಮಾ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿತ್ತು. ಇದರ ಶೂಟಿಂಗ್‌ಗೂ ಕೊರೊನಾ ಭೀತಿ ತಟ್ಟಿದ್ದರಿಂದ ಚಿತ್ರೀಕರಣ ಸ್ಥಗಿತಗೊಂಡಿದೆ.

ಹಾಗಾಗಿಯೇ, ಬಾಕಿ ಉಳಿದಿರುವ ಶೂಟಿಂಗ್ ಪೂರ್ಣಗೊಳಿಸಿ ಮುಂದಿನ ವರ್ಷದ ಜನವರಿ 8ರಂದು ಸಿನಿಮಾ ಬಿಡುಗಡೆಗೆ ಚಿತ್ರತಂಡ ದಿನಾಂಕ ಘೋಷಿಸಿತ್ತು. ಆದರೆ, ಆ ವೇಳೆಗೆ ಬಾಕಿ ಇರುವ ಚಿತ್ರೀಕರಣ ಮತ್ತು ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಪೂರ್ಣಗೊಳಿಸಲು ಸಾಧ್ಯವೇ? ಜೊತೆಗೆ, ಚಿತ್ರದ ಪ್ರಚಾರಕ್ಕೆ ಸಮಯಾವಕಾಶ ಬೇಡವೇ ಎಂಬ ಪ್ರಶ್ನೆಗೆ ಚಿತ್ರತಂಡಕ್ಕೆ ಎದುರಾಗಿದೆ. ಜೊತೆಗೆ, ಆಲಿಯಾ ಭಟ್‌ ಅವರ ಶೂಟಿಂಗ್‌ ಕೂಡ ಬಾಕಿಯಿದೆ.

ಹಾಗಾಗಿ, 2021ರ ಜುಲೈ 30ರಂದು ಸಿನಿಮಾ ಬಿಡುಗಡೆ ನಿರ್ಧರಿಸಲಾಗಿದೆ ಎಂಬ ಮಾಹಿತಿ ಟಾಲಿವುಡ್‌ ಅಂಗಳದಿಂದ ಹೊರಬಿದ್ದಿದೆ. ಆದರೆ, ಚಿತ್ರ ನಿರ್ಮಾಣ ಸಂಸ್ಥೆಯಾದ ಡಿವಿವಿ ಎಂಟರ್‌ಟೈನ್‌ಮೆಂಟ್ಸ್‌ನಿಂದ ಅಧಿಕೃತವಾಗಿ ಸುದ್ದಿ ಹೊರಬಿದ್ದಿಲ್ಲ. ಜೂನಿಯರ್‌ ಎನ್‌ಟಿಆರ್‌ ಮತ್ತು ರಾಮ್‌ಚರಣ್‌ ನಟಿಸಿರುವ ಈ ಚಿತ್ರ ಕನ್ನಡ ಸೇರಿದಂತೆ ಹತ್ತು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT