ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

RRR ಟ್ರೈಲರ್ ರಿಲೀಸ್ ಬಗ್ಗೆ ಹೊರಬಿತ್ತು ಕುತೂಹಲಕಾರಿ ಮಾಹಿತಿ!

ರೌದ್ರ ರಣ ರುಧಿರ ಸಿನಿಮಾ
Last Updated 29 ನವೆಂಬರ್ 2021, 10:29 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಎಸ್‌ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಆರ್‌ಆರ್‌ಆರ್‌‘ (ರೌದ್ರ, ರಣ, ರುಧಿರ) ಕಣ್ತುಂಬಿಕೊಳ್ಳಲು ಸಿನಿಪ್ರಿಯರು ತುದಿಗಾಲ ಮೇಲೆ ನಿಂತಿದ್ದಾರೆ. ಚಿತ್ರ ಬರುವ ಜನವರಿ 7 ರಂದು ಜಗತ್ತಿನಾದ್ಯಂತ ಏಕಕಾಲಕ್ಕೆ ಸಿನಿಮಾ ಮಂದಿರಗಳಲ್ಲಿ ತೆರೆ ಕಾಣಲಿದೆ.

ಆದರೆ, ಅದಕ್ಕೂ ಮುನ್ನ ಚಿತ್ರದ ಟ್ರೈಲರ್ ಬಿಡುಗಡೆಯಾಗಬೇಕಿದೆ. ಕಳೆದ ವಾರ ಬೆಂಗಳೂರಿಗೆ ಭೇಟಿ ನೀಡಿದ್ದ ರಾಜಮೌಳಿ ಅವರು ಡಿಸೆಂಬರ್‌ನಲ್ಲಿ ಟ್ರೈಲರ್ ಲಾಂಚ್ ಮಾಡುವ ಸುಳಿವು ನೀಡಿದ್ದರು.

ಆರ್‌ಆರ್‌ಆರ್ಟ್ರೈಲರ್ ಇದೇ ಶುಕ್ರವಾರ ಅಥವಾ ಭಾನುವಾರ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಒಂದು ಕುತೂಹಲಕರ ಮಾಹಿತಿ ಏನೆಂದರೆ ಟ್ರೈಲರ್‌ನ್ನು ನೇರವಾಗಿ ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡದೇ, ಸಿನಿಮಾ ಮಂದಿರಗಳಲ್ಲಿ ಮೊದಲು ಬಿಡುಗಡೆ ಮಾಡಲಾಗುತ್ತದೆ. ಆದರೆ, ಈ ಬಗ್ಗೆ ಚಿತ್ರತಂಡ ಖಚಿತ ಮಾಹಿತಿಯನ್ನು ಇದುವರೆಗೆ ಬಿಟ್ಟುಕೊಟ್ಟಿಲ್ಲ.

ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಸಂಸ್ಥೆಯು ಸುಮಾರು ₹400 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಚಿತ್ರವು 20ನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ದ ಅಲ್ಲೂರಿ ಸೀತಾರಾಮರಾಜು ಮತ್ತು ಕೋಮರಂ ಭೀಮ್‌ ಅವರ ಜೀವನ ಕಥೆಯನ್ನು ಆಧರಿಸಿದೆ.

ಈ ಚಿತ್ರದಲ್ಲಿ ರಾಮ್‌ಚರಣ್ ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ, ಜೂನಿಯರ್ ಎನ್‌ಟಿಆರ್ ಕೋಮರಂ ಭೀಮ್ ಪಾತ್ರದಲ್ಲಿ ಮಿಂಚಿದ್ದಾರೆ. ಬಾಲಿವುಡ್ ನಟರಾದ ಅಜಯ್ ದೇವ್‌ಗನ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT