ರಘು ಕೋವಿ ನಿರ್ದೇಶನದ ಚೊಚ್ಚಲ ಸಿನಿಮಾ ‘ರೂಬಿ’ಯ ಶೀರ್ಷಿಕೆ ಅನಾವರಣ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು.

ಅಜಯ್ ರಾವ್ ನಟನೆಯ ‘ಕೃಷ್ಣ ಲೀಲಾ’ ಸಿನಿಮಾಗೆ ಸ್ಕ್ರಿಪ್ಟ್ ಬರೆದಿದ್ದ ರಘು ಕೋವಿ, ಅದಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದರು. ನಿರ್ದೇಶಕರಾದ ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ಎಂ.ಎಸ್.ರಾಜಶೇಖರ್, ಕೆ.ವಿ.ರಾಜು, ಶಶಾಂಕ್, ಉಪೇಂದ್ರ ಮುಂತಾದವರ ಸಿನಿಮಾಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವವಿರುವ ರಘು ಇದೇ ಮೊದಲ ಬಾರಿಗೆ ನಿರ್ದೇಶಕರಾಗಿ ಪರೀಕ್ಷೆ ಎದುರಿಸಲಿದ್ದಾರೆ.

‘ನನ್ನ ಕನಸಿಗೆ ಇಬ್ಬರು ನಿರ್ಮಾಪಕರು ಸಾಥ್ ಕೊಟ್ಟಿದ್ದಾರೆ. ಒಂದು ಪ್ರೇಮಕಥೆಯನ್ನು ಸಂಗೀತದ ಮೂಲಕ ಹೇಳಲು ಸಾಧ್ಯವಿದೆ. ಅದನ್ನು ಆರ್.ಪಿ.ಪಟ್ನಾಯಕ್ ಅವರಂತಹ ಸಂಗೀತ ನಿರ್ದೇಶಕರು ಈ ಸಿನಿಮಾ ಮೂಲಕ ಹೇಳಿದ್ದಾರೆ. ಹೈದರಾಬಾದ್ನಲ್ಲಿ ನಡೆದ ನೈಜ ಘಟನೆಯನ್ನು ಈ ಸಿನಿಮಾ ಮೂಲಕ ಹೇಳಲು ಹೊರಟ್ಟಿದ್ದೇವೆ. ಚಿತ್ರದಲ್ಲಿ ಐದು ಹಾಡುಗಳು ಇವೆ. ಶೇಕಡ 50ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ’ ಎಂದರು ರಘು.

‘ದಿಲ್ಮಾರ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಹೀರೊ ಆಗಿ ಹೆಜ್ಜೆ ಇಟ್ಟ ರಾಮ್ ಗೌಡ ‘ರೂಬಿ’ಯಲ್ಲಿ ನಾಯಕರಾಗಿ ಅಭಿನಯಿಸುತ್ತಿದ್ದು, ‘ಗಾಳಿಪಟ–2’, ‘ಮಾರ್ಟಿನ್’ ಸಿನಿಮಾ ಖ್ಯಾತಿಯ ನಟಿ ವೈಭವಿ ಶಾಂಡಿಲ್ಯ ನಾಯಕಿಯಾಗಿ ಜೋಡಿಯಾಗಿದ್ದಾರೆ. ವೆಂಕಟೇಶ್ ಅಂಗುರಾಜ್ ಛಾಯಾಚಿತ್ರಗ್ರಹಣ, ಸುರೇಶ್ ಅರಸ್ ಸಂಕಲನ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಇವಾನ್ ಫಿಲ್ಮ್ಸ್ ಈ ಸಿನಿಮಾವನ್ನು ನಿರ್ಮಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.