ವೀರಗಾಸೆ ಕಲೆ ಕುರಿತಾದ ಕಥೆಯನ್ನು ಹೊಂದಿರುವ ‘ರುದ್ರಾಭಿಷೇಕಂ’ ಚಿತ್ರದ ಮೊದಲ ಹಾಡು ಇತ್ತೀಚೆಗಷ್ಟೆ ಬಿಡುಗಡೆಗೊಂಡಿದೆ. ವಿಜಯ ರಾಘವೇಂದ್ರ, ಪ್ರಿಯಾಂಕಾ ತಿಮ್ಮೇಶ್ ಜೋಡಿಯಾಗಿರುವ ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ. ವಸಂತ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ.

‘ನನಗೆ ವೀರಗಾಸೆ ಪಾತ್ರ ಮಾಡುವುದು ತುಂಬಾ ಸವಾಲಾಗಿತ್ತು. ಈ ಪಾತ್ರವನ್ನು ಅನುಭವಿಸಿ ಮಾಡಿದ್ದೇನೆ. ನನ್ನ ಪೂರ್ವಜರ ಕಾಲದಲ್ಲಿ ನಡೆದ ಘಟನೆ ಈಗಿನ ಕಾಲದ ವ್ಯಕ್ತಿಗೆ ಕನೆಕ್ಟ್ ಆಗುತ್ತ ಹೋಗುತ್ತದೆ. ತಂದೆ, ಮಗನಾಗಿ ಎರಡೂ ಪಾತ್ರಗಳನ್ನು ನಿಭಾಯಿಸಿದ್ದೇನೆ ಎಂದರು’ ವಿಜಯ ರಾಘವೇಂದ್ರ.

‘ದೈವದ ಹಿನ್ನೆಲೆ ಇರುವ ಜನಪದ ಕಲೆಯನ್ನು ನಾಡಿನ ಮನೆ ಮನೆಗೂ ತಲುಪಿಸಬೇಕು ಎನ್ನುವುದೇ ನಮ್ಮ ಉದ್ದೇಶ. ಚಿತ್ರದಲ್ಲಿ ನಾನೂ ಓರ್ವ ತತ್ವಜ್ಞಾನಿಯಾಗಿ ನಟಿಸಿದ್ದೇನೆ. ತಂದೆ, ಮಗ ಎರಡೂ ಪಾತ್ರಗಳ ಜತೆ ಇಡೀ ಚಿತ್ರದಲ್ಲಿ ಬರುವ ನನ್ನ ಪಾತ್ರಕ್ಕೂ ಎರಡು ಗೆಟಪ್ ಇದೆ. ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ದೇವನಹಳ್ಳಿ ಸುತ್ತಮುತ್ತ ಹಾಗೂ ಗೋಕರ್ಣ, ಹೊನ್ನಾವರ, ಕುಮಟ, ಅಘನಾಶಿನಿ ಹಿನ್ನೀರಿನ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ’ ಎಂದರು ನಿರ್ದೇಶಕ.

ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಮೂಲಕ ಒಂಬತ್ತು ಮಂದಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ವಿ.ಮನೋಹರ್ ಸಂಗೀತವಿದೆ. ಬಲ ರಾಜವಾಡಿ, ವಿ.ಮನೋಹರ್, ಮನು, ಸನತ್, ಬುಲೆಟ್ ವಿನು, ಮಮತಾ, ನವನಿತಾ ಶೆಟ್ಟಿ, ಮಂಜುಳಾ ಮುಂತಾದವರು ಚಿತ್ರದಲ್ಲಿದ್ದಾರೆ. ಮುತ್ತುರಾಜ್ ಅವರ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-51-1764316244

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.