ತಮಿಳು ನಟ ಧನುಷ್ ಒಂದರ ಹಿಂದೊಂದು ಸಿನಿಮಾಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಧನುಷ್ ಅವರು ನಿರ್ದೇಶಕ ತಮಿಳರಸನ್ ಪಚಮುತ್ತು ಜತೆ ಮುಂದಿನ ಚಿತ್ರಕ್ಕೆ ಕೈಜೋಡಿಸಲಿದ್ದಾರೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ.

‘ಲಬ್ಬರ್ ಪಾಂಡು’ ಎಂಬ ಸೂಪರ್ ಹಿಟ್ ಚಿತ್ರ ನೀಡಿದ್ದ ಪಚಮುತ್ತು, ಧನುಷ್ ಅವರ 56ನೇ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗಿದೆ. ಅಂದಹಾಗೆ ಈ ಚಿತ್ರದಲ್ಲಿ ನಾಯಕಿಯಾಗಿ ಕನ್ನಡದ ನಟಿ ರುಕ್ಮಿಣಿ ವಸಂತ್ ಧನುಷ್ಗೆ ಜೋಡಿಯಾಗಲಿದ್ದಾರೆ ಎಂಬ ವದಂತಿ ದಟ್ಟವಾಗಿದೆ.

‘ಕಾಂತಾರ–1’ ಯಶಸ್ಸಿನ ಬಳಿಕ ರುಕ್ಮಿಣಿ ಅವರ ಬಳಿ ಹಲವು ಸಿನಿಮಾಗಳಿವೆ. ಕನ್ನಡದ ಜತೆ ಬೇರೆ ಭಾಷೆಗಳಿಂದಲೂ ಹೆಚ್ಚು ಅವಕಾಶಗಳು ಬರುತ್ತಿವೆ. ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಡ್ರ್ಯಾಗನ್’ನಲ್ಲಿ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ಗೆ ನಾಯಕಿಯಾಗಿದ್ದಾರೆ. ಹೇಮಂತ್ ರಾವ್ ನಿರ್ಮಾಣದ ಕನ್ನಡ ಸಿನಿಮಾವೊಂದರಲ್ಲಿಯೂ ಇವರು ನಾಯಕಿಯಾಗಿದ್ದಾರೆ ಎಂಬ ಸುದ್ದಿಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.