ಪ್ರಭಾಸ್ ಮತ್ತು ಶ್ರದ್ಧಾ ಕಪೂರ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಸಾಹೋ’ ವಿಶ್ವದಾದ್ಯಂತ ಇಂದು ತೆರೆ ಕಂಡಿದೆ. ಎರಡು ವರ್ಷದ ಬಳಿಕ ನಟ ಪ್ರಭಾಸ್ ಪರದೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಾಗಿ, ಸಿನಿಮಾ ಮೇಲೆ ಕುತೂಹಲ ಹೆಚ್ಚಿತ್ತು. ಆದರೆ, ಚಿತ್ರಕ್ಕೆ ಸಿನಿ ವಿಶ್ಲೇಷಕರಿಂದ ವಿಭಿನ್ನಪ್ರತಿಕ್ರಿಯೆ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಭಿನ್ನವಾದ ಅಭಿಪ್ರಾಯಗಳು ಕೇಳಿಬರುತ್ತಿವೆ.

ಈ ನಡುವೆಯೇ ಚಿತ್ರವನ್ನು ತಮಿಳು ರಾಕರ್ಸ್ ತಮ್ಮ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ ಎನ್ನಲಾಗಿದೆ. ಇದು ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಸಿನಿಮಾ ಬಿಡುಗಡೆಗೂ ಮೊದಲು ಚಿತ್ರದ ನಾಯಕಿ ಶ್ರದ್ಧಾ ಕಪೂರ್, ‘ಸಾಹೋ ಬಿಗ್ ಸ್ಕ್ರೀನ್‌ನಲ್ಲಿ ಬಿಡುಗಡೆಯಾಗಲಿದೆ. ಅಭಿಮಾನಿಗಳು, ಪ್ರೇಕ್ಷಕರು ಥಿಯೇಟರ್‌ಗೆ ಬಂದು ಸಿನಿಮಾ ನೋಡಿ. ಪೈರಸಿಗೆ ಪ್ರೋತ್ಸಾಹ ನೀಡಬೇಡಿ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಕೋರಿದ್ದಾರೆ.

ತಮಿಳು ರಾಕರ್ಸ್ ಕನ್ನಡ, ತೆಲುಗು, ತಮಿಳು, ಮಲಯಾಳ ಸೇರಿದಂತೆ ಬಾಲಿವುಡ್ ಚಿತ್ರಗಳನ್ನು ತೆರೆಕಂಡ ತಕ್ಷಣವೇ ಸೋರಿಕೆ ಮಾಡುವುದರಲ್ಲಿ ಎತ್ತಿದ ಕೈ. ಈಗ ‘ಸಾಹೋ’ಗೂ ಪೈರಸಿಯ ಬಿಸಿ ತಟ್ಟಿರುವುದಂತು ಸತ್ಯ.

₹ 350 ಕೋಟಿ ವೆಚ್ಚದಡಿ ‘ಸಾಹೋ’ ನಿರ್ಮಿಸಲಾಗಿದೆ. ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳ ಭಾಷೆಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರ 4,500ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.