ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಹಸ ಸಿಂಹ ವಿಷ್ಣುವರ್ಧನ್‌ರ 74ನೇ ಜನ್ಮದಿನ: ಅಭಿಮಾನಿಗಳಿಂದ ನೆಚ್ಚಿನ ನಟನ ಸ್ಮರಣೆ

ಖ್ಯಾತ ನಟ, ಕನ್ನಡ ಚಿತ್ರರಂಗದ ‘ಸಾಹಸ ಸಿಂಹ’ ದಿವಂಗತ ವಿಷ್ಣುವರ್ಧನ್ ಅವರ 74ನೇ ಜನ್ಮದಿನವನ್ನು ಅವರ ಅಭಿಮಾನಿಗಳು ಬೆಂಗಳೂರು ಸೇರಿದಂತೆ ನಾಡಿನಾದ್ಯಂತ ಆಚರಿಸುತ್ತಿದ್ದಾರೆ
Published : 18 ಸೆಪ್ಟೆಂಬರ್ 2024, 5:51 IST
Last Updated : 18 ಸೆಪ್ಟೆಂಬರ್ 2024, 5:51 IST
ಫಾಲೋ ಮಾಡಿ
Comments

ಬೆಂಗಳೂರು: ಖ್ಯಾತ ನಟ, ಕನ್ನಡ ಚಿತ್ರರಂಗದ ‘ಸಾಹಸ ಸಿಂಹ’ ದಿವಂಗತ ವಿಷ್ಣುವರ್ಧನ್ ಅವರ 74ನೇ ಜನ್ಮದಿನವನ್ನು ಇಂದು (ಸೆ.18) ಅವರ ಅಭಿಮಾನಿಗಳು ಬೆಂಗಳೂರು ಸೇರಿದಂತೆ ನಾಡಿನಾದ್ಯಂತ ಆಚರಿಸುತ್ತಿದ್ದಾರೆ.

ಅನ್ನದಾನ, ಆಸ್ಪತ್ರೆಗಳಲ್ಲಿ ಹಣ್ಣು ವಿತರಣೆ, ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ವಿಷ್ಣು ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಆಚರಿಸುತ್ತಿದ್ದಾರೆ.

ಚಂದನವನದ ತಾರೆಯರು, ಅಭಿಮಾನಿಗಳು ಹಾಗೂ ರಾಜಕೀಯ ನಾಯಕರು, ಸಂಘ ಸಂಸ್ಥೆಗಳ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ನೆಚ್ಚಿನ ’ದಾದಾ’ನನ್ನು ಸ್ಮರಿಸಿದ್ದಾರೆ.

ಅಭಿನಯ ಭಾರ್ಗವ ವಿಷ್ಣುವರ್ಧನ್ ಅವರನ್ನು ಅಭಿಮಾನಿಗಳ ಪ್ರೀತಿಯಿಂದ ವಿಷ್ಣುದಾದಾ ಎಂದೇ ಕರೆಯುತ್ತಾರೆ. ಅವರು ಭೌತಿಕವಾಗಿ ಇಲ್ಲದಿದ್ದರೂ ಸಿನಿಮಾಗಳ ಮೂಲಕ ಜೀವಂತವಾಗಿದ್ದಾರೆ. 200 ಸಿನಿಮಾಗಳಲ್ಲಿ ನಟಿಸಿರುವ ವಿಷ್ಣು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.

ರಾಜ್ಯದ ಎಲ್ಲ ಕಡೆ ಅವರ ಅಭಿಮಾನಿಗಳು ಇಂದು ಹುಟ್ಟುಹಬ್ಬವನ್ನುಆಚರಿಸುತ್ತಿದ್ದಾರೆ.

ಸೆಪ್ಟೆಂಬರ್ 18, 1950ರಲ್ಲಿ ಮೈಸೂರಿನಲ್ಲಿ ಜನಿಸಿದ ಸಂಪತ್‌ಕುಮಾರ್ ಹೆಸರಿನ ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗದ ಮೇರು ಪ್ರತಿಭೆ ಅಷ್ಟೇ ಅಲ್ಲದೇ ಅವರು ಕನ್ನಡದ ಸಾಂಸ್ಕೃತಿಕ ರಾಯಭಾರಿಗಳಾಗಿದ್ದರು. 1972 ರಲ್ಲಿ ವಂಶವೃಕ್ಷ ಸಿನಿಮಾ ಮೂಲಕ ಚಿತ್ರರಂಗ ಪದಾರ್ಪಣೆ ಮಾಡಿದ ವಿಷ್ಣುವರ್ಧನ್ ಅವರು ಅದೇ ವರ್ಷ ತೆರೆಕಂಡ ನಾಗರಹಾವು ಸಿನಿಮಾ ಮೂಲಕ ನಾಯಕ ನಟನಾಗಿ ಮಿಂಚಿದರು.

2009 ಡಿಸೆಂಬರ್ 30ರಂದು ವಿಷ್ಣುವರ್ಧನ್ ಅವರು ಇಹಲೋಕ ತ್ಯಜಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT