ಶನಿವಾರ, ಸೆಪ್ಟೆಂಬರ್ 26, 2020
21 °C

ಹಸೆಮಣೆ ಏರಿದ ಸಾಹೋ ನಿರ್ದೇಶಕ ಸುಜಿತ್‌

. Updated:

ಅಕ್ಷರ ಗಾತ್ರ : | |

Prajavani

‘ಸಾಹೋ’ ಖ್ಯಾತಿಯ ನಿರ್ದೇಶಕ ಸುಜಿತ್ ತಮ್ಮ ಬಹುಕಾಲದ ಪ್ರೇಯಸಿ ಪ್ರವಲ್ಲಿಕ ಜೊತೆ ಭಾನುವಾರ (ಆಗಸ್ಟ್‌ 2) ರಾತ್ರಿ ಹಸೆಮಣೆ ಏರಿದ್ದಾರೆ. ಹೈದರಾಬಾದ್‌ನ ರೆಸಾರ್ಟ್‌ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದರು.

ಈ ಜೋಡಿ ಕಳೆದ ತಿಂಗಳು ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ದಂತವೈದ್ಯೆಯಾಗಿರುವ ಪ್ರವಲ್ಲಿಕ ಹಾಗೂ ಸುಜಿತ್ ಅನೇಕ ವರ್ಷಗಳಿಂದ ಪ್ರೀತಿಸುತ್ತಿದ್ದರು. 

ಈ ನಿರ್ದೇಶಕ ತಮ್ಮ ಮದುವೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ ಗಿಬ್ರಾನ್ ಸೇರಿದಂತೆ ಅನೇಕ ಮಂದಿ ಸೆಲೆಬ್ರಿಟಿಗಳು ಸಾಮಾಜಿಕ ಜಾಲಗಳಲ್ಲಿ ಇವರ ಮದುವೆಯ ಫೋಟೊ ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು