ಶನಿವಾರ, ಡಿಸೆಂಬರ್ 4, 2021
26 °C

ಗುಣಮುಖನಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ ತೆಲುಗು ನಟ ಸಾಯಿ ತೇಜ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಬೈಕ್‌ ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೆಲುಗು ನಟ ಸಾಯಿ ಧರಂ ತೇಜ್ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈಗ ಮೆಗಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ವಿಜಯದಶಮಿ ಹಬ್ಬ ಹಾಗೂ ಹುಟ್ಟುಹಬ್ಬದ ದಿನವೇ ಸಾಯಿ ತೇಜ್‌ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿರುವುದಕ್ಕೆ ಮೆಗಾ ಕುಟುಂಬ ಹಾಗೂ ಅಭಿಮಾನಿಗಳು ಸಂತಸಪಟ್ಟಿದ್ದಾರೆ. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.

’ಇಂದು ಸಾಯಿ ಧರಂ ತೇಜ್ ಜನ್ಮದಿನ, ಇದೇ ದಿನ ಅವನು ಗುಣಮುಖನಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾನೆ. ಈ ಶುಭ ಸಂದರ್ಭದಲ್ಲಿ ನಾವೆಲ್ಲ ಒಟ್ಟಿಗೆ ಸೇರಿ ಅವನೊಂದಿಗೆ ಜನ್ಮದಿನ ಆಚರಿಸುತ್ತಿದ್ದೇವೆ’ ಎಂದು ಚಿರಂಜೀವಿ ಟ್ವೀಟ್‌ ಮಾಡಿದ್ದರು. 

 ಸೆಪ್ಟೆಂಬರ್‌ 10ರ ರಾತ್ರಿ 8 ಗಂಟೆಗೆ ಮಾಧಾಪುರ್ ಕೇಬಲ್ ಸೇತುವೆ ಮೇಲೆ ತೇಜ್ ಚಲಾಯಿಸುತ್ತಿದ್ದ ಬೈಕ್ ಉರುಳಿ ಬಿದ್ದು, ಅವರಿಗೆ ಕೈಕಾಲು, ಪಕ್ಕೆಲುಬು ಸೇರಿದಂತೆ ದೇಹದ ನಾನಾ ಕಡೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಅಪೋಲೋ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಅಕ್ಟೋಬರ್‌ 1ರಂದು ಬಿಡುಗಡೆಯಾದ ಸಾಯಿ ತೇಜ್ ಅಭಿನಯದ ’ರಿಪಬ್ಲಿಕ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ದೇವ ಕಟ್ಟಾ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ನಾಯಕಿಯಾಗಿ ಐಶ್ವರ್ಯಾ ರಾಜೇಶ್‌, ಮುಖ್ಯ ಪಾತ್ರಗಳಲ್ಲಿ ರಮ್ಯಾ ಕೃಷ್ಣ, ಜಗಪತಿ ಬಾಬು ನಟಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು