‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ಆ್ಯಕ್ಷನ್ ಕಟ್ ಹೇಳಿರುವ, ಪೃಥ್ವಿ ಅಂಬಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಚೌಕಿದಾರ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.

ಅಪ್ಪ ಮಗನ ಬಾಂಧವ್ಯದ ಕುರಿತಾದ ಈ ಸಿನಿಮಾದಲ್ಲಿ ಸಾಯಿಕುಮಾರ್ ಹಾಗೂ ಪೃಥ್ವಿ ಅಂಬಾರ್ ತಂದೆ–ಮಗನಾಗಿದ್ದಾರೆ. ಇತ್ತೀಚೆಗೆ ಚಿತ್ರದ ‘ಓ ಮೈ ಬ್ರೋ’ ಹಾಡು ಬಿಡುಗಡೆಯಾಗಿದೆ. ತಂದೆ ಪಾತ್ರ ನಿರ್ವಹಿಸಿರುವ ಸಾಯಿಕುಮಾರ್ ಅವರು ಈ ಹಾಡಿನಲ್ಲಿ ಭರ್ಜರಿಯಾಗಿ ಹೆಜ್ಜೆ ಹಾಕಿರುವುದು ವಿಶೇಷ. ಮುರುಳಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡನಲ್ಲಿ ಪೃಥ್ವಿ ಅಂಬಾರ್ ಹಾಗೂ ಸಾಯಿಕುಮಾರ್ ಡ್ಯಾನ್ಸ್ ಜುಗಲ್ ಬಂದಿ ಗಮನಸೆಳೆದಿದೆ.

ಚಿತ್ರರಂಗದಲ್ಲಿ ಐವತ್ತು ವರ್ಷ ಪೂರೈಸಿರುವ ಸಾಯಿಕುಮಾರ್ ‘ಚೌಕಿದಾರ್’ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿದ್ದಾರೆ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ‘ಓ ಮೈ ಬ್ರೋ’ ಹಾಡಿಗಿದ್ದು, ಕೈಲಾಶ್ ಖೇರ್ ದನಿಯಾಗಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಹಾಡಿಗಿದೆ. ಚಿತ್ರದಲ್ಲಿ ಪೃಥ್ವಿಗೆ ಧನ್ಯಾ ರಾಮ್ಕುಮಾರ್ ಜೋಡಿಯಾಗಿದ್ದಾರೆ. ‘ಚೈತ್ರದ ಪ್ರೇಮಾಂಜಲಿ’ ಚಿತ್ರದ ನಾಯಕಿ ಶ್ವೇತಾ, ಸಾಯಿಕುಮಾರ್ ತಾರಾಬಳಗದಲ್ಲಿದ್ದಾರೆ. ಸುಧಾರಾಣಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿದ್ದಾರೆ. ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದು, ಸಿದ್ದು ಕಂಚನಹಳ್ಳಿ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.