ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಂಪಲ್‌ ಸೀರೆಯಲ್ಲಿ ಗಮನ ಸೆಳೆದ ಸಾಯಿ ಪಲ್ಲವಿ: ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ

ಅಕ್ಷರ ಗಾತ್ರ

ಬೆಂಗಳೂರು: ಮಲಯಾಳಂನ‘ಪ್ರೇಮಂ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಾಯಿ ಪಲ್ಲವಿ ಈಗ ಬಿಡುವಿಲ್ಲದ ನಟಿ. ಪಾತ್ರಗಳ ಆಯ್ಕೆಯಲ್ಲೂ ಆಕೆ ಸಾಕಷ್ಟು ಚ್ಯೂಸಿ. ಸರಳತೆಗೆ ಹೆಚ್ಚು ಮಹತ್ವ ನೀಡುವ ಅವರು ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ದೇಶದಾದ್ಯಂತ ದೊಡ್ಡ ಅಭಿಮಾನಿ ಬಳಗ ಹೊಂದಿರುವ ಸಾಯಿ ಪಲ್ಲವಿ ಅವರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸಿಂಪಲ್‌ ಸೀರೆಯಲ್ಲಿ ಮಿಂಚಿರುವ ಸಾಯಿ ಪಲ್ಲವಿ ಫೋಟೊಗಳನ್ನು ನೋಡಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಲಿವುಡ್‌ನಿಂದ ವೃತ್ತಿಬದುಕು ಆರಂಭಿಸಿದರೂ ತಮಿಳು ಮತ್ತು ತೆಲುಗಿನ ಹಲವು ಚಿತ್ರಗಳಲ್ಲಿ ಆಕೆ ನಟಿಸಿದ್ದಾರೆ. ಟಾಲಿವುಡ್‌ನಲ್ಲಿ ಆಕೆ ನಟಿಸಿದ ಮೊದಲ ಚಿತ್ರ ‘ಫಿದಾ’. ರೊಮ್ಯಾಂಟಿಕ್‌ ಪ್ರೇಮಕಥೆಯ ಸುತ್ತ ಹೆಣೆದಿದ್ದ ಈ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದು ಶೇಖರ್‌ ಕಮ್ಮುಲು. ವರುಣ್‌ ತೇಜ್ ಇದರಲ್ಲಿ ನಾಯಕರಾಗಿ ನಟಿಸಿದ್ದಾರೆ.

ಬಳಿಕ ನಾಗ ಚೈತನ್ಯ ನಟನೆಯ ‘ಲವ್ ಸ್ಟೋರಿ’, ನಾನಿ ನಟನೆಯ ‘ಶ್ಯಾಮ್‌ ಸಿಂಗ ರಾಯ್‌’, ರಾಣಾ ದಗ್ಗುಬಾಟಿ ನಾಯಕನಾಗಿರುವ ‘ವಿರಾಟ ಪರ್ವಂ’ ಚಿತ್ರಗಳಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ.

ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಇತ್ತೀಚಿಗೆಸಾಯಿ ಪಲ್ಲವಿ ನೀಡಿದ್ದ ಹೇಳಿಕೆ ಪರ –ವಿರೋಧದ ಚರ್ಚೆಗೆ ಗ್ರಾಸವಾಗಿತ್ತು.

‘ಯಾವುದೇ ರೀತಿಯ ಹಿಂಸಾಕೃತ್ಯಗಳು ಸಮರ್ಥನೀಯವಲ್ಲ. ಅಲ್ಲದೆ, ಯಾವುದೇ ಧರ್ಮದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದು ದೊಡ್ಡ ಪಾಪ’ ಎಂದು ಹೇಳಿದ್ದರು. ತಮ್ಮ ಹೇಳಿಕೆವಿವಾದದ ಸ್ವರೂಪವನ್ನು ಪಡೆದಿರುವ ಹಿನ್ನೆಲೆಯಲ್ಲಿ ವಿಡಿಯೊ ಸಂದೇಶದಲ್ಲಿ ಅವರು ಸ್ಪಷ್ಟನೆ ನೀಡಿದ್ದರು.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT