ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲಾರ್‌ ಸಿನಿಮಾ ಯಶಸ್ಸು: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಪ್ರಭಾಸ್

Published 1 ಜನವರಿ 2024, 11:58 IST
Last Updated 1 ಜನವರಿ 2024, 11:58 IST
ಅಕ್ಷರ ಗಾತ್ರ

ಹೈದರಾಬಾದ್‌: ಸಲಾರ್‌ ಭಾಗ–1 ಚಿತ್ರ ಯಶಸ್ಸಿನ ಬೆನ್ನಲ್ಲೇ ನಟ ಪ್ರಭಾಸ್‌ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಸಲಾರ್‌ ಭಾಗ–1 ಚಿತ್ರದ ಮೇಲೆ ಅಭಿಮಾನಿಗಳು ತೋರಿಸಿದ ಪ್ರೀತಿಗೆ ನಾನು ಅಭಾರಿಯಾಗಿದ್ದೇನೆ‘ ಎಂದು ಸಂತಸ ಹಂಚಿಕೊಂಡಿದ್ದಾರೆ.

ಈ ವೇಳೆ ಹೊಸ ವರ್ಷದ ಶುಭಾಶಯಗಳನ್ನೂ ಸಹ ಪ್ರಭಾಸ್‌ ಕೋರಿದ್ದಾರೆ.

‘ಕೆ.ಜಿ.ಎಫ್‌’ ಖ್ಯಾತಿಯ ಪ್ರಶಾಂತ್‌ ನೀಲ್‌ ನಿರ್ದೇಶಿಸಿರುವ ‘ಸಲಾರ್‌’ ಚಿತ್ರವು ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್‌ ಮುಖ್ಯಭೂಮಿಕೆಯಲ್ಲಿದ್ದಾರೆ. ತಾಂತ್ರಿಕವಾಗಿ ‘ಕೆಜಿಎಫ್‌’ತಂಡವೇ ಇದೆ. ರವಿ ಬಸ್ರೂರು ಸಂಗೀತ, ಭುವನ್‌ ಗೌಡ ಛಾಯಾಗ್ರಹಣ ಚಿತ್ರಕ್ಕಿದೆ. ನಾಯಕ ನಟಿಯಾಗಿ ಶೃತಿ ಹಾಸನ್‌ ಅಭಿನಯಿಸಿದ್ದಾರೆ.

ಈ ಚಿತ್ರ ಕನ್ನಡ, ತೆಲುಗು, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ತೆರೆ ಕಂಡಿದೆ.

‘ಸಲಾರ್‌’ ಚಿತ್ರದ ಮೊದಲ ಭಾಗಕ್ಕೆ ‘ಸೀಸ್‌ ಫೈರ್‌’ಎಂಬ ಅಡಿಬರಹವಿದೆ. ಹೊಂಬಾಳೆ ಫಿಲ್ಮ್ಸ್‌ನಡಿ ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT