ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ ಪ್ರಭಾಸ್‌ ನಟನೆಯ ‘ಸಲಾರ್‌’

Published 7 ಜನವರಿ 2024, 9:40 IST
Last Updated 7 ಜನವರಿ 2024, 9:40 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲುಗು ಖ್ಯಾತ ನಟ ಪ್ರಭಾಸ್‌ ನಟಿಸಿರುವ ‘ಸಲಾರ್‌’ ಚಿತ್ರವು ಈ ಬೇಸಿಗೆಯಲ್ಲಿ ಜಪಾನ್‌ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರ ನಿರ್ಮಾಪಕರು ತಿಳಿಸಿದ್ದಾರೆ.

‘ಕೆಜಿಎಫ್‌’ ಖ್ಯಾತಿಯ ಪ್ರಶಾಂತ್‌ ನೀಲ್‌ ನಿರ್ದೇಶನದ, ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಿರುವ ‘ಸಲಾರ್‌’ ಚಿತ್ರವನ್ನು ಜಪಾನಿನ ಚಲನಚಿತ್ರ ವಿತರಣಾ ಕಂಪನಿ ಟ್ವಿನ್‌ ಬಿಡುಗಡೆ ಮಾಡಲಿದೆ.

ಈ ಕುರಿತು ಸಲಾರ್‌ನ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ನಿರ್ಮಾಪಕರು, ‘ಸಲಾರ್‌’ ಈ ಬೇಸಿಗೆಯಲ್ಲಿ ಜಪಾನ್‌ನಾದ್ಯಂತ ಬರಲಿದೆ. ಚಲನಚಿತ್ರ ವಿತರಣಾ ಕಂಪನಿ ಟ್ವಿನ್‌, ಚಿತ್ರಮಂದಿರಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಿದೆ. ಅಲ್ಲದೆ, ಮಾರ್ಚ್‌ 7ರಂದು ಲ್ಯಾಟಿನ್‌ ಅಮೆರಿಕದಲ್ಲಿ ಸ್ಪ್ಯಾನಿಷ್‌ ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ನಟ ಪ್ರಭಾಸ್‌ ಹಾಗೂ ಪೃಥ್ವಿರಾಜ್‌ ಸುಕುಮಾರನ್‌ ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ‘ಸಲಾರ್‌’ ಚಿತ್ರವು, ಡಿಸೆಂಬರ್‌ 22ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಗೊಂಡಿತ್ತು. ಜಾಗತಿಕ ಮಟ್ಟದಲ್ಲಿ ₹650 ಕೋಟಿ ಗಳಿಸಿದೆ.

ಚಿತ್ರದಲ್ಲಿ ನಟಿ ಶ್ರುತಿ ಹಾಸನ್‌, ಜಗಪತಿ ಬಾಬು, ಈಶ್ವರಿ ರಾವ್‌, ಶ್ರೀಯಾ ರೆಡ್ಡಿ ಮುಂತಾದ ಖ್ಯಾತ ಕಲಾವಿದರು ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT