ಬುಧವಾರ, ಸೆಪ್ಟೆಂಬರ್ 22, 2021
23 °C

ಸಲಾರ್‌: ಪ್ರಭಾಸ್‌ ಹೇರ್‌ಸ್ಟೈಲ್‌ಗೆ ಲಕ್ಷಾಂತರ ರೂಪಾಯಿ ವೆಚ್ಚ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಜಿಎಫ್‌ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಆ್ಯಕ್ಷನ್‌ ಥ್ರಿಲ್ಲರ್‌ ‘ಸಲಾರ್‌’ ಚಿತ್ರದಲ್ಲಿನ ನಾಯಕ ಪ್ರಭಾಸ್‌ ಹೇರ್‌ಸ್ಟೈಲ್‌ಗೆ ಲಕ್ಷಾಂತರ ರೂಪಾಯಿಗಳನ್ನು ವೆಚ್ಚ ಮಾಡಲಾಗಿಯಂತೆ.

ಈ ಸಿನಿಮಾದಲ್ಲಿ ಪ್ರಭಾಸ್‌ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್‌ನ ಖ್ಯಾತ ಕೇಶ ವಿನ್ಯಾಸಕರೊಬ್ಬರು ಪ್ರಭಾಸ್‌ ಹೇರ್‌ಸ್ಟೈಲ್‌ ಮಾಡಿದ್ದಾರೆ ಎಂದು ಚಿತ್ರತಂಡ ಹೇಳಿದೆ. ಇದಕ್ಕಾಗಿ ₹ 4 ಲಕ್ಷ ಖರ್ಚು ಮಾಡಲಾಗಿದೆ ಟಾಲಿವುಡ್‌ ಮಾಧ್ಯಮಗಳು ತಿಳಿಸಿವೆ.

ಹೊಂಬಾಳೆ ಫಿಲಂಸ್ ಬ್ಯಾನರ್‌ನ ವಿಜಯ್ ಕಿರಗಂದೂರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು ಇದು ಪ್ಯಾನ್‌ ಇಂಡಿಯಾ ಸಿನಿಮಾ ಆಗಿದೆ.

ಸಲಾರ್ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು