ಶನಿವಾರ, ಜೂನ್ 19, 2021
22 °C

10ರಿಂದ ‘ಸಲಗ’ ಶೂಟಿಂಗ್‌ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟ ದುನಿಯಾ ವಿಜಯ್‌ ನಟನೆಯ ‘ಸಲಗ’ ಚಿತ್ರದ ಮುಹೂರ್ತ ಜೂನ್‌ 6ರಂದು ಬೆಂಗಳೂರಿನ ಗವಿಪುರ ಗುಟ್ಟಳ್ಳಿಯಲ್ಲಿರುವ ಬಂಡೆ ಮಹಾಕಾಳಿ ದೇವಾಲಯದಲ್ಲಿ ನಡೆಯಲಿದ್ದು, ಇದೇ 10ರಿಂದ ಶೂಟಿಂಗ್‌ ಆರಂಭವಾಗಲಿದೆ. ಚಿತ್ರೀಕರಣಕ್ಕಾಗಿ ಚಿತ್ರತಂಡ ಸಿದ್ಧತೆಯಲ್ಲಿ ಮುಳುಗಿದೆ.

ಇದು ವಿಜಿ ನಿರ್ದೇಶಿಸುತ್ತಿರುವ ಮೊದಲ ಚಿತ್ರ. ದುನಿಯಾ ಸೂರಿ ಅವರನ್ನು ಹೊರತುಪಡಿಸಿದರೆ ‘ಟಗರು’ ಚಿತ್ರದಲ್ಲಿ ಕೆಲಸ ಮಾಡಿದ್ದ ತಂತ್ರಜ್ಞರ ತಂಡವೇ ‘ಸಲಗ’ದಲ್ಲಿಯೂ ಕೆಲಸ ಮಾಡಲು ಸಜ್ಜಾಗಿರುವುದು ವಿಶೇಷ. 

‘ಡಾಲಿ’ ಖ್ಯಾತಿಯ ಧನಂಜಯ್‌ ಮತ್ತು ‘ಕಾಕ್ರೋಚ್‌’ ಪಾತ್ರಧಾರಿ ಸುಧಿ ಅವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆ.‍ಪಿ. ಶ್ರೀಕಾಂತ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಇದು ಭೂಗತ ಜಗತ್ತಿನ ನೈಜ ಘಟನೆ ಆಧಾರಿತ ಕಥೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು