ಶನಿವಾರ, ಜೂನ್ 19, 2021
22 °C

ಜ. 5ಕ್ಕೆ ‘ಸಲಗ’ ಸಿನಿಮಾದ ಆಡಿಯೊ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

2018ರಲ್ಲಿ ತೆರೆಕಂಡ ದುನಿಯಾ ವಿಜಯ್‌ ನಟನೆಯ ‘ಕನಕ’ ಮತ್ತು ‘ಜಾನಿ ಜಾನಿ ಯಸ್‌ ಪಪ್ಪಾ’ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಾಣಲಿಲ್ಲ. ಈ ವರ್ಷ ವಿಜಯ್‌ ನಟನೆಯ ಯಾವುದೇ ಸಿನಿಮಾವೂ ಬಿಡುಗಡೆಯಾಗಿಲ್ಲ. ಹಾಗಾಗಿ, ಅವರೇ ನಿರ್ದೇಶಿಸಿ ನಾಯಕನಾಗಿ ನಟಿಸುತ್ತಿರುವ ‘ಸಲಗ’ ಚಿತ್ರ ಕಥೆ ಮತ್ತು ಮೇಕಿಂಗ್‌ನಿಂದ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

ಈ ಚಿತ್ರದ ಶೂಟಿಂಗ್‌ ಬಹುತೇಕ ಮುಗಿದಿದ್ದು, ಡಬ್ಬಿಂಗ್‌ ಕೂಡ ಪೂರ್ಣಗೊಂಡಿದೆ. ಎಡಿಟಿಂಗ್‌ ಕೆಲಸವೂ ಅಂತಿಮ ಹಂತದಲ್ಲಿದೆ. ನಾಯಕನ ಎಂಟ್ರಿ ಸಾಂಗ್‌ವೊಂದನ್ನು ಮಾತ್ರ ಚಿತ್ರತಂಡ ಬಾಕಿ ಉಳಿಸಿಕೊಂಡಿದೆಯಂತೆ. ಈ ಹಾಡನ್ನು ಅದ್ದೂರಿಯಾಗಿ ಚಿತ್ರೀಕರಿಸುವುದು ಚಿತ್ರತಂಡದ ಉದ್ದೇಶ.

ಕೆ.ಪಿ. ಶ್ರೀಕಾಂತ್ ಬಂಡವಾಳ ಹೂಡಿರುವ ಈ ಚಿತ್ರದಲ್ಲಿ ‘ಟಗರು’ ಚಿತ್ರತಂಡವೇ ಕೆಲಸ ಮಾಡುತ್ತಿದೆ. ‘ಡಾಲಿ’ ಖ್ಯಾತಿಯ ಧನಂಜಯ್ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ವಿಜಯ್‌ಗೆ ಸಂಜನಾ ಆನಂದ್ ನಾಯಕಿಯಾಗಿದ್ದಾರೆ.

ಜನವರಿ 5ರಂದು ‘ಸಲಗ’ದ ಆಡಿಯೊ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ. ‘ಸೆಂಚುರಿ ಸ್ಟಾರ್’ ಶಿವರಾಜ್ಕುಮಾರ್ ಅವರು ಆಡಿಯೊ ಬಿಡುಗಡೆ ಮಾಡಲಿದ್ದಾರಂತೆ. ಅಂದಹಾಗೆ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಚರಣ್‌ರಾಜ್‌ ಸಂಗೀತ ಸಂಯೋಜಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು