ಗುರುವಾರ , ಮೇ 6, 2021
22 °C

ನಾಕು ಕ್ವಾಟ್ರು ಕುಡುದ್ರೂ...ಸೂರಿ ಅಣ್ಣಾ: ಅಂಥೋನಿ ದನಿಯಲ್ಲಿ ಸಲಗದ ಹಾಡು ಕೇಳಿ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಚಿತ್ರದ ಲಿರೀಕಲ್‌ ಸಾಂಗ್‌ ಬಿಡುಗಡೆಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸೌಂಡು ಮಾಡುತ್ತಿದೆ. 

ನಾಕು ಕ್ವಾಟ್ರು ಕುಡುದ್ರೂ, ಸ್ಟಡಿಯಾಗಿ ನಿಲ್ತಿದ್ದೆ ಸೂರಿ ಅಣ್ಣಾ...ಲಿರೀಕಲ್‌ ಹಾಡನ್ನು ನಟ ಶಿವರಾಜ್‌ಕುಮಾರ್‌ ಬಿಡುಗಡೆಮಾಡಿದ್ದಾರೆ. ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿರುವ ಈ ಹಾಡನ್ನು ಒಂದೇ ದಿನದಲ್ಲಿ ಸುಮಾರು 4 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. 

2018ರಲ್ಲಿ ತೆರೆಕಂಡ ‘ಕನಕ’ ಮತ್ತು ‘ಜಾನಿ ಜಾನಿ ಯಸ್‌ ಪಪ್ಪಾ’ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಾಣಲಿಲ್ಲ. 2019ರಲ್ಲಿ ವಿಜಯ್‌ ನಟನೆಯ ಯಾವುದೇ ಸಿನಿಮಾವೂ ಬಿಡುಗಡೆಯಾಗಿಲ್ಲ. ಹಾಗಾಗಿ, ಅವರೇ ನಿರ್ದೇಶಿಸಿ ನಾಯಕನಾಗಿ ನಟಿಸುತ್ತಿರುವ ‘ಸಲಗ’ ಚಿತ್ರ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

ಈ ಚಿತ್ರದ ಶೂಟಿಂಗ್‌ ಬಹುತೇಕ ಮುಗಿದಿದ್ದು, ಡಬ್ಬಿಂಗ್‌ ಕೂಡ ಪೂರ್ಣಗೊಂಡಿದೆ. ಎಡಿಟಿಂಗ್‌ ಕೆಲಸವೂ ಅಂತಿಮ ಹಂತದಲ್ಲಿದೆ ಎಂದು ಚಿತ್ರತಂಡ ಹೇಳಿದೆ. ಕೆ.ಪಿ. ಶ್ರೀಕಾಂತ್ ಬಂಡವಾಳ ಹೂಡಿರುವ ಈ ಚಿತ್ರದಲ್ಲಿ ‘ಟಗರು’ ಚಿತ್ರತಂಡವೇ ಕೆಲಸ ಮಾಡುತ್ತಿದೆ. ‘ಡಾಲಿ’ ಖ್ಯಾತಿಯ ಧನಂಜಯ್ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ವಿಜಯ್‌ಗೆ ಸಂಜನಾ ಆನಂದ್ ನಾಯಕಿಯಾಗಿದ್ದಾರೆ. ಚರಣ್‌ರಾಜ್‌ ಸಂಗೀತ ಸಂಯೋಜಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು