ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2022ರ ಏಪ್ರಿಲ್‌ 14ಕ್ಕೆ ‘ಸಾಲಾರ್‌’ ಬಿಡುಗಡೆ

Last Updated 28 ಫೆಬ್ರುವರಿ 2021, 11:01 IST
ಅಕ್ಷರ ಗಾತ್ರ

ಸಾಲಾರ್‌ ಚಿತ್ರವನ್ನು ಮುಂದಿನ ವರ್ಷ ಏ. 14ಕ್ಕೆ ಬಿಡುಗಡೆಗೊಳಿಸುವುದಾಗಿ ಹೊಂಬಾಳೆ ಫಿಲ್ಮ್ಸ್‌ ಪ್ರಕಟಿಸಿದೆ. ಭಾನುವಾರ ಹೊಂಬಾಳೆ ಫಿಲ್ಮ್ಸ್‌ ಟ್ವಿಟರ್‌ ಖಾತೆಯಲ್ಲಿ ಈ ವಿಷಯ ಪ್ರಕಟಿಸಿದೆ. ನಾವು ನಿಮ್ಮೊಂದಿಗೆ ಸಂಭ್ರಮಿಸಲು ಇನ್ನು ಕಾಯಲಾಗುವುದಿಲ್ಲ #Salaar14Apr22 ಎಂದು ಹ್ಯಾಷ್‌ಟ್ಯಾಗ್‌ ಹಾಕಿ ಈ ಬರಹ ಪ್ರಕಟಿಸಿದೆ.

ಜನವರಿ 15ರಂದು ಈ ಚಿತ್ರ ಹೈದರಾಬಾದ್‌ನಲ್ಲಿ ಸೆಟ್ಟೇರಿತ್ತು. ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಸೇರಿದಂತೆ ಹಲವರು ಭಾಗಿಯಾಗಿದ್ದರು. ಈ ಚಿತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ಪ್ರಭಾಸ್‌ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ವಿಜಯ್‌ ಕಿರಗಂದೂರು ಈ ಚಿತ್ರ ನಿರ್ಮಿಸುತ್ತಿದ್ದಾರೆ. ಪ್ರಶಾಂತ್‌ ನೀಲ್‌ ಅವರ ನಿರ್ದೇಶನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT