ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಇರುವ ಕಾರಣ ಶಸ್ತ್ರಾಸ್ತ್ರ ಪರವಾನಗಿ ನೀಡಲಾಗಿದೆ.

ಇತ್ತೀಚೆಗೆ ಸಲ್ಮಾನ್ ಖಾನ್ ಅವರಿಗೆ ಹತ್ಯೆ ಬೆದರಿಕೆ ಸಂದೇಶ ಬಂದಿತ್ತು. ಹೀಗಾಗಿ ಸ್ವಯಂ ರಕ್ಷಣೆಗಾಗಿ ಅವರಿಗೆ ಶಸ್ತ್ರಾಸ್ತ್ರ ಪರವಾನಗಿ ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿರುವುದಾಗಿ ‘ಎಎನ್‌ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜೀವ ಬೆದರಿಕೆ: ಬುಲೆಟ್ ಪ್ರೂಫ್ಕಾರ್ ತೆಗೆದುಕೊಂಡ ನಟ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ಇತ್ತೀಚೆಗಷ್ಟೇ ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿಯಾಗಿ, ಪಿಸ್ತೂಲ್ ಇಟ್ಟುಕೊಳ್ಳಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.

ಪಂಜಾಬಿ ಗಾಯಕ ಸಿಧು ಮೂಸೆವಾಲಾ ರೀತಿಯಲ್ಲಿ ಹತ್ಯೆ ಮಾಡುವುದಾಗಿ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬೆದರಿಕೆ ಪತ್ರ ಬಂದಿತ್ತು. ಬಳಿಕ ಅವರ ಕುಟುಂಬದ ಭದ್ರತೆಯನ್ನು ಹೆಚ್ಚಿಸಲಾಗಿತ್ತು.

ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿಯಾದ ಸಲ್ಮಾನ್ ಖಾನ್

‘ಪಾತಕಿ ಲಾರೆನ್ಸ್ ಬಿಷ್ಣೋಯಿ ಗುಂಪಿನ ಸದಸ್ಯರಿಂದ ತಮಗೆ ಜೀವಬೆದರಿಕೆ ಇದೆ’ ಎಂದು ಸಲ್ಮಾನ್ ಖಾನ್ ಪರ ವಕೀಲ ಹಸ್ತಿ ಮಾಲ್ ಸರಸ್ವತ್ ಸಹ ಇತ್ತೀಚೆಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಬುಲೆಟ್ ಪ್ರೂಫ್ ಕಾರು ಖರೀದಿಸಿದ್ದಾರೆ ಎಂದು ಭಾನುವಾರ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.