ಮುಂಬೈ: ಹಿಂದಿ ಚಿತ್ರರಂಗದಲ್ಲಿ ಹೊಸದೊಂದು ವಿವಾದ ಮುನ್ನೆಲೆಗೆ ಬಂದಿದೆ. ಮುಂಬರುವ ‘ಕಾಲಾ ಹಿರನ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran: The Battle for Legacy) ಸಿನಿಮಾವು ಸಲ್ಮಾನ್ ಖಾನ್ ಅವರ ಬಹುಚರ್ಚಿತ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿದೆ ಎಂದು ವರದಿಯಾಗಿದೆ.

ಇದೀಗ ಇದೇ ವಿಚಾರವಾಗಿ ಸಲ್ಮಾನ್ ಖಾನ್ ಅವರ ವಕೀಲರ ತಂಡವು, ತಕ್ಷಣವೇ ಚಿತ್ರ ಬಿಡುಗಡೆಗೆ ತಡೆ ಕೋರಿ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದೆ.

ಚಿತ್ರಕ್ಕೆ ಸಂಬಂಧಿಸಿದ ಪೋಸ್ಟರ್ಗಳು ಮತ್ತು ಪ್ರಚಾರ ಸಾಮಗ್ರಿಗಳನ್ನು ತಕ್ಷಣವೇ ಹಿಂಪಡೆಯಬೇಕು. ಚಿತ್ರತಂಡವು ಇದಕ್ಕೆ ಒಪ್ಪದಿದ್ದರೆ, ಕಾನೂನು ಹೋರಾಟ ಎದುರಿಸಬೇಕಾಗುತ್ತದೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.

ಈ ವಿವಾದವು 'ಕಾಲಾ ಹಿರನ್: ದಿ ಬ್ಯಾಟಲ್ ಫಾರ್ ಲೆಗಸಿ' ಚಿತ್ರ ಬಿಡುಗಡೆಗೆ ಕಂಟಕ ತಂದೊಡ್ಡಿದೆ. ಆದರೆ, ಈ ಗದ್ದಲದ ನಡುವೆಯೂ ‘ಜಾನಿ ಫೈರ್ಫಾಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ಚಿತ್ರದ ಮೊದಲ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದು, ಜೂನ್ 20ರಂದು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ಘೋಷಿಸಿದೆ.

ಪೋಸ್ಟರ್ನಲ್ಲಿರುವ ನಟನ ಚಿತ್ರವು ಸಲ್ಮಾನ್ ಖಾನ್ ಅವರ ಮುಖಚಹರೆ, ಬಲಿಷ್ಠ ದೇಹ ಮತ್ತು ಪ್ರಸಿದ್ಧ 'ಟ್ರೇಡ್ಮಾರ್ಕ್ ಬ್ರೇಸ್ಲೆಟ್' ಅನ್ನು ಹೋಲುವಂತಿರುವುದು ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ. ಇದೊಂದು ಸಸ್ಪೆನ್ಸ್ ಆಕ್ಷನ್ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡಿದೆ.

ಭರತ್ ಎಸ್. ಶ್ರೀನಾಥೆ ಅವರ ನಿರ್ದೇಶನ ಈ ಚಿತ್ರಕ್ಕಿದೆ. ನಿರ್ಮಾಪಕ ಅಮಿತ್ ಜಾನಿ ಅವರು ತಮ್ಮ ಚಿತ್ರಗಳ ಮೂಲಕ ವಿವಾದ ಮೈಮೇಲೆ ಎಳೆದುಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಟೈಲರ್ ‘ಕನ್ಹಯ್ಯಾ ಲಾಲ್’ ಕೊಲೆಯನ್ನು ಆಧರಿಸಿ ಸಿನಿಮಾ ಮಾಡಿದ್ದೂ ಸೇರಿದಂತೆ, ವಿವಾದಾತ್ಮಕ ನೈಜ ಘಟನೆಗಳ ಸುತ್ತ ಯೋಜನೆಗಳನ್ನು ರೂಪಿಸಿದ ಇತಿಹಾಸವಿದೆ.

‘ಸಲ್ಮಾನ್ ಖಾನ್ ಅವರು ತಮ್ಮ ಸ್ಟಾರ್ಗಿರಿಯನ್ನು ಬಳಸಿಕೊಂಡು ನಮ್ಮನ್ನು ಹೆದರಿಸಲು ಒತ್ತಡ ಹೇರುತ್ತಿದ್ದಾರೆ’ ಎಂದು ಅಮಿತ್ ಜಾನಿ ಆರೋಪಿಸಿದ್ದಾರೆ.

ಜಾನಿ ಆರೋಪ ಸಂಬಂಧ ಸಲ್ಮಾನ್ ಖಾನ್ ಅಥವಾ ಅವರ ಕಾನೂನು ತಂಡವಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.