ಶುಕ್ರವಾರ, ಅಕ್ಟೋಬರ್ 7, 2022
28 °C

ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿಯಾದ ಸಲ್ಮಾನ್ ಖಾನ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರು ಶುಕ್ರವಾರ, ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 4 ಗಂಟೆ ಸುಮಾರಿಗೆ ಕ್ರಾಫೊರ್ಡ್ ಮಾರುಕಟ್ಟೆಯ ಎದುರಿರುವ ಮುಂಬೈ ಪೊಲೀಸ್ ಪ್ರಧಾನ ಕಚೇರಿಗೆ ಆಗಮಿಸಿದ್ದ ಅವರು ಮಾತುಕತೆ ನಡೆಸಿದ್ದಾರೆ. 

ಜಂಟಿ ಪೊಲೀಸ್ ಆಯುಕ್ತರನ್ನೂ ಭೇಟಿಯಾಗಿರುವ ಸಲ್ಮಾನ್ ಖಾನ್, ಇದೊಂದು ಔಪಚಾರಿಕ ಭೇಟಿಯಷ್ಟೇ ಎಂದು ಹೇಳಿದ್ದಾರೆ.

ಪಂಜಾಬಿ ಗಾಯಕ ಸಿಧು ಮೂಸೆವಾಲಾ ರೀತಿಯೇ ನೀವು ಮತ್ತು ನಿಮ್ಮ ತಂದೆಯನ್ನು ಕೊಲ್ಲುವುದಾಗಿ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು. ಬಳಿಕ ಸಲ್ಲೂ ಕುಟುಂಬಕ್ಕೆ ಭದ್ರತೆ ಹೆಚ್ಚಿಸಲಾಗಿತ್ತು.

ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಶಂಕಿತ ಆರೋಪಿಗಳನ್ನು ಪಂಜಾಬ್‌ನ ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿ ಇತ್ತೀಚೆಗೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ.

ಮೃತರನ್ನು ಜಗರೂಪ್ ಸಿಂಗ್ ರೂಪಾ ಹಾಗೂ ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸಾ ಎಂದು ಗುರುತಿಸಲಾಗಿದೆ.

ಕಳೆದ ತಿಂಗಳು ಸಲ್ಮಾನ್ ಖಾನ್ ಕುಟುಂಬಕ್ಕೆ ಬೆದರಿಕೆ ಬಂದಿತ್ತು. ಕೃತ್ಯದಲ್ಲಿ ಇದೇ ಗ್ಯಾಂಗ್‌ನ ಕೈವಾಡವಿರುವ ಶಂಕೆ ವ್ಯಕ್ತವಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು