ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಲ್ಡಿ ಬ್ರಾರ್‌ ಜೊತೆ ಮಾತನಾಡು, ಇಲ್ಲದಿದ್ದರೆ.. ನಟ ಸಲ್ಮಾನ್‌ಗೆ ಮತ್ತೆ ಬೆದರಿಕೆ

Last Updated 20 ಮಾರ್ಚ್ 2023, 3:08 IST
ಅಕ್ಷರ ಗಾತ್ರ

ಮುಂಬೈ: ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಪಾತಕಿ ಲಾರೆನ್ಸ್‌ ಬಿಷ್ಣೊಯ್‌ನಿಂದ ಹಾಗೂ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಸೋಮವಾರ ಬೆಳಿಗ್ಗೆಯಿಂದ ಮುಂಬೈ ಪೊಲೀಸರು ಬಾಂದ್ರಾದ ಸಲ್ಮಾನ್ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಆರಂಭಿಸಿದ್ದಾರೆ.

ಸಲ್ಮಾನ್ ಖಾನ್ ನನ್ನ ಹಾಗೂ ನನ್ನ ಗುಂಪಿನ ಕ್ಷಮೆ ಕೇಳಬೇಕು. ಇಲ್ಲದಿದ್ದರೇ ಸಲ್ಮಾನ್‌ ಖಾನ್‌ ಅವರನ್ನು ಶೀಘ್ರದಲ್ಲೇ ಕೊಲ್ಲುತ್ತೇವೆ, ಅವರ ಇಲ್ಲವೇ ಅಹಂ ಇಳಿಸುತ್ತೇವೆ ಎಂದು ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿದ್ದ.

ಮತ್ತೊಂದು ಬೆದರಿಕೆ: ದೂರು ದಾಖಲು

ಲಾರೆನ್ಸ್‌ ಬಿಷ್ಣೋಯ್ ಶುಕ್ರವಾರ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ಕಳಿಸಿದ್ದ ನಂತರ ಈಗ ಮತ್ತೊಂದು ಬೆದರಿಕೆ ಪತ್ರ ಸಲ್ಮಾನ್‌ ಖಾನ್‌ ಕಚೇರಿಗೆ ಈ ಮೇಲ್ ಮೂಲಕ ಬಂದಿದೆ.

ಅದರಲ್ಲಿ ‘ಸಲ್ಮಾನ್ ನೀನು ಗೋಲ್ಡಿ ಬ್ರಾರ್‌ನ್ನು ಮುಖಾಮುಖಿಯಾಗಿ ಭೇಟಿಯಾಗಬೇಕು. ಇಲ್ಲದಿದ್ದರೇ ಮುಂದಾಗುವ ಅನಾಹುತಕ್ಕೆ ನೀನೆ ಹೊಣೆ.. ಮುಂದಿನ ಸಾರಿ ಖಂಡಿತ’ ಎಂದು ಹೇಳಲಾಗಿದೆ. ಈ ಪತ್ರವನ್ನು ಗೋಲ್ಡಿ ಬ್ರಾರ್‌ ಸಹಾಯಕ ಕಳಿಸಿದ್ದಾನೆ ಎಂದು ಹೇಳಲಾಗಿದೆ.

ಬೆದರಿಕೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಕಚೇರಿಯ ಸಿಬ್ಬಂದಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಿಧು ಮೂಸೆವಾಲಾ ಹತ್ಯೆ ಪ್ರಕಣದಲ್ಲಿ ಪ್ರಮುಖ ಆರೋಪಿಯೂ ಆಗಿರುವ ಗೋಲ್ಡಿ ಬ್ರಾರ್‌ ಕೆನಡಾದಲ್ಲಿರುವ ಭಾರತ ಮೂಲದ ಗ್ಯಾಂಗ್‌ಸ್ಟರ್ ಆಗಿದ್ದಾನೆ. ಸದ್ಯ ಪಂಜಾಬ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಲಾರೆನ್ಸ್‌ ಬಿಷ್ಣೊಯ್‌ ಪಂಜಾಬ್‌ನ ಬತಿಂಡಾದ ಜೈಲಿನಲ್ಲಿದ್ದಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT