ಬುಧವಾರ, ಆಗಸ್ಟ್ 17, 2022
25 °C

ಈದ್ ಹಬ್ಬದಂದು ಸಲ್ಮಾನ್ ಖಾನ್‌ ನಟನೆಯ ‘ರಾಧೆ’ ಚಿತ್ರಮಂದಿರದಲ್ಲಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಲ್ಮಾನ್ ಖಾನ್ ನಟನೆಯ ‘ರಾಧೆ’ ಚಿತ್ರ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈದ್‌ ಮಿಲಾದ್‌ನಂದು ರಾಧೆ ಚಿತ್ರ ಬಿಡುಗಡೆಯಾಗಲಿದೆ. ಈ ವಿಷಯವನ್ನು ಸ್ವತಃ ಸಲ್ಮಾನ್ ಖಾನ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬಹಿರಂಗ ಪಡಿಸಿದ್ದಾರೆ. ಪ್ರಭುದೇವ ನಿರ್ದೇಶನದ ಈ ಸಿನಿಮಾ 2020ಮೇ ತಿಂಗಳಿಗೆ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಸೋಂಕಿನ ಕಾರಣದಿಂದ ಲಾಕ್‌ಡೌನ್ ವಿಧಿಸಿದ್ದರಿಂದ ಬಿಡುಗಡೆ ಸಾಧ್ಯವಾಗಿರಲಿಲ್ಲ.

ಸಲ್ಲುಮಿಯಾ ಸಿನಿಮಾ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಕೊನೆಗೂ ಖುಷಿಯ ಸಮಾಚಾರ ಸಿಕ್ಕಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಘೋಷಿಸಿರುವ ಸಲ್ಲು ತಮ್ಮ ನಿರ್ಧಾರದಿಂದ ಸಿನಿಮಾ ವಿತರಕರು ಹಾಗೂ ಚಿತ್ರಮಂದಿರಗಳ ಮಾಲೀಕರಿಗೆ ಸಹಾಯವಾಗಲಿದೆ ಎಂದಿದ್ದಾರೆ.

‘ಈ ಸಮಯದಲ್ಲಿ ಇಂತಹ ದೊಡ್ಡ ನಿರ್ಧಾರ ತೆಗೆದುಕೊಳ್ಳುವುದು ನಿಜಕ್ಕೂ ಕಷ್ಟವೇ. ಆದರೆ ನನಗೆ ಸಿನಿಮಾ ವಿತಕರು ಹಾಗೂ ಚಿತ್ರಮಂದಿರಗಳ ಮಾಲೀಕರ ಆರ್ಥಿಕ ಸಮಸ್ಯೆಗಳ ಬಗ್ಗೆ ಅರಿವಿದೆ. ಆ ಕಾರಣಕ್ಕೆ ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ನನ್ನ ರಾಧೆ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ನಿರ್ಧಾರ ಮಾಡಿದ್ದೇನೆ’.

‘ನನ್ನ ಅಭಿಮಾನಿಗಳಿಗೆ ನಾನು ಕೇಳಿಕೊಳ್ಳುವುದು ಇಷ್ಟೇ. ಅದೇನೆಂದರೆ ನಿಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ಕಾಳಜಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ. ಈ ಸಿನಿಮಾ ಮುಂದಿನ ಈದ್ ಹಬ್ಬದಂದು ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ನೋಡಿ ಎಂಜಾಯ್ ಮಾಡಿ’ ಎಂದು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ರಾಧೆ ಚಿತ್ರದಲ್ಲಿ ದಿಶಾ ಪಟಾನಿ, ಜಾಕಿ ಶ್ರಾಫ್‌, ಝರಿನಾ ವಹಾಬ್‌ ಹಾಗೂ ರಣ್‌ದೀಪ್‌ ಹೂಡಾ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್‌ ಖಾನ್ ಫಿಲ್ಸ್ಮ್‌, ಸೋಹೆಲ್‌ ಖಾನ್ ಪ್ರೊಡಕ್ಷನ್ ಹಾಗೂ ರೀಲ್ ಲೈಫ್ ಪ್ರೊಡಕ್ಷನ್ ಹಣ ಹೂಡಿಕೆ ಮಾಡಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು