ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಬಾಡಿಗಾರ್ಡ್' ಸಿನಿಮಾ ನಿರ್ದೇಶಕ ಸಿದ್ಧಿಕಿ ನಿಧನ

Published 9 ಆಗಸ್ಟ್ 2023, 2:25 IST
Last Updated 9 ಆಗಸ್ಟ್ 2023, 2:25 IST
ಅಕ್ಷರ ಗಾತ್ರ

ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ಧಿಕಿ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.

ರಾತ್ರಿ 9.10ಕ್ಕೆ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳು ಇದ್ದಾರೆ.

ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಅವರು ಸುಮಾರು ಒಂದು ತಿಂಗಳಿನಿಂದ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಹೃದಯಾಘಾತವಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸಿದ್ಧಿಕಿ ಅವರ ‍ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ರಾಜೀವ್‌ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

1986ರಲ್ಲಿ ತೆರೆಕಂಡ 'ಪಪ್ಪನ್ ಪ್ರಿಯಪ್ಪೆತ್ತ ಪಪ್ಪನ್‌' ಸಿನಿಮಾಗೆ ಚಿತ್ರಕತೆ ಬರೆಯುವುದರೊಂದಿಗೆ ಸಿನಿ ಪಯಣ ಆರಂಭಿಸಿದ ಸಿದ್ಧಿಕಿ, 1989ರಲ್ಲಿ ಬಿಡುಗಡೆಯಾದ 'ರಾಮ್‌ಜಿ ರಾವ್‌ ಸ್ಪೀಕಿಂಗ್‌' ಸಿನಿಮಾ ಮೂಲಕ ನಿರ್ದೇಶಕರಾದರು. ಅವರು ನಿರ್ದೇಶನ ಮಾಡಿರುವ ಕೊನೇ ಸಿನಿಮಾ 'ಬಿಗ್‌ ಬ್ರದರ್‌' 2020ರಲ್ಲಿ ಬಿಡುಗಡೆಯಾಗಿದೆ. ಮಲಯಾಳಂ ಮಾತ್ರವಲ್ಲದೆ ತಮಿಳು, ಹಿಂದಿಯಲ್ಲೂ ಸಿನಿಮಾ ನಿರ್ದೇಶಿಸಿದ ಖ್ಯಾತಿ ಅವರದ್ದು.

ಸಿದ್ಧಿಕಿ ನಿರ್ದೇಶನದ 'ಬಾಡಿಗಾರ್ಡ್‌' ಸಿನಿಮಾ ಭಾರಿ ಯಶಸ್ಸು ಕಂಡಿತ್ತು. ಈ ಚಿತ್ರವನ್ನು ಅವರು ತಮಿಳಿನಲ್ಲಿ ವಿಜಯ್‌ ಜೊತೆಗೂಡಿ 'ಕಾವಲನ್‌' ಮತ್ತು ಹಿಂದಿಯಲ್ಲಿ ನಟ ಸಲ್ಮಾನ್‌ ಖಾನ್‌ ಅದೇ (ಬಾಡಿಗಾರ್ಡ್‌) ಹೆಸರಿನಲ್ಲಿ ನಿರ್ದೇಶನ ಮಾಡಿದ್ದರು. ಬಳಿಕ ಈ ಚಿತ್ರ ಕನ್ನಡದಲ್ಲೂ ತಯಾರಾಯಿತು. ನಟ ಜಗ್ಗೇಶ್‌ ನಾಯಕನಾಗಿ ಕಾಣಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT