ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಟ್‌ ಕೊಹ್ಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ನಟ ಸಲ್ಮಾನ್ ಖಾನ್

Published 19 ನವೆಂಬರ್ 2023, 11:24 IST
Last Updated 19 ನವೆಂಬರ್ 2023, 11:24 IST
ಅಕ್ಷರ ಗಾತ್ರ

ಮುಂಬೈ: ಭಾರತ ಕ್ರಿಕೆಟ್‌ ತಂಡದ ಆಟಗಾರ ವಿರಾಟ್‌ ಕೊಹ್ಲಿ ಅವರ ಆಟದ ವೈಖರಿ ಬಗ್ಗೆ ಬಾಲಿವುಡ್‌ ನಟ ಸಲ್ಮಾನ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡ ಗೆಲುವು ಕಾಣಲಿದೆ ಎಂದರು.

‘ವಿರಾಟ್‌ ಕೊಹ್ಲಿ ಅವರ ಸಮರ್ಪಣಾ ಮನೋಭಾವ ಹಾಗೂ ಉತ್ಸಾಹ ಮೆಚ್ಚುವಂತಹದ್ದು. ಸಚಿನ್ ತೆಂಡೂಲ್ಕರ್‌ ಅವರ ದಾಖಲೆ ಪುಟಿಗಟ್ಟುವುದು ಸಾಮಾನ್ಯ ವಿಷಯವಲ್ಲ’ ಎಂದು ಸಲ್ಮಾನ್ ಹೇಳಿದ್ದಾರೆ

‘ಕೊಹ್ಲಿ ಬೆಳದು ಬಂದ ಹಾದಿ, ಈವರೆಗೆ ಅವರು ತಲುಪಲು ಪಟ್ಟಿರುವ ಶ್ರಮ ಮತ್ತು ತ್ಯಾಗದ ಪ್ರತಿಫಲವಾಗಿದ್ದು, ಇದು ನಿಜಕ್ಕೂ ಶ್ಲಾಘನೀಯ‘ ಎಂದು ಸಲ್ಮಾನ್ ತಿಳಿಸಿದ್ದಾರೆ.

‘ಭಾರತ ತಂಡವು ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಇಂದು ಸಹ ಭಾರತ ತಂಡ ಗೆಲ್ಲಬೇಕು. ಗೆದ್ದೆ ಗೆಲ್ಲುತ್ತದೆ ಎಂದು ಹೇಳಿದ್ದಾರೆ‘. ಈ ಬಗ್ಗೆ ಸುದ್ದಿಸಂಸ್ಥೆ ಐಎಎನ್‌ಎಸ್‌ ವರದಿ ಮಾಡಿದೆ.

ಈವರೆಗೂ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ (49) ಬಾರಿಸಿದ ದಾಖಲೆ ಸಚಿನ್‌ ಅವರ ಹೆಸರಿನಲ್ಲಿ ಇತ್ತು. ನ್ಯೂಜಿಲೆಂಡ್‌ ವಿರುದ್ಧದ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ‍ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಆ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದರು.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಣದಲ್ಲಿ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪಂದ್ಯ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT