ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸಂಚು ರೂಪಿಸಿತ್ತು ಎಂದು ಪಂಜಾಬ್ ಡಿಜಿಪಿ ಮಾಹಿತಿ ನೀಡಿದ್ದಾರೆ.

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಹೊಣೆಯನ್ನು ಇದೇ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿದೆ.

ಸದ್ಯ ಜೈಲು ಪಾಲಾಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಸೂಚನೆ ಮೇರೆಗೆ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಭಾನುವಾರ ಹೇಳಿದ್ದಾರೆ.

ಮೂಸೆವಾಲಾ ಕೊಲೆ ಆರೋಪಿ ಕಪಿಲ್ ಪಂಡಿತ್‌ನ ಪ್ರಾಥಮಿಕ ತನಿಖೆಯಲ್ಲಿ ಈ ಸ್ಟೋಟಕ ಮಾಹಿತಿ ಬಹಿರಂಗಗೊಂಡಿದೆ. ಸಲ್ಮಾನ್ ಖಾನ್ ಹತ್ಯೆ ನಡೆಸಲು ಬಿಷ್ಣೋಯಿ ಗ್ಯಾಂಗ್ ನನ್ನನ್ನು ಸಂಪರ್ಕಿಸಿತ್ತು ಎಂದು ಕಪಿಲ್ ಪಂಡಿತ್ ಹೇಳಿಕೆ ನೀಡಿದ್ದಾನೆ ಎಂದು ಡಿಜಿಪಿ ತಿಳಿಸಿದ್ದಾರೆ.

ಮೇ 29 ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಮೂಸೆವಾಲಾ ಕೊಲೆಯಾದ ಕೆಲವು ದಿನಗಳ ನಂತರ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಬಂದಿತ್ತು.

ಬಿಷ್ಣೋಯಿಗಳಿಗೆ ಕೃಷ್ಣ ಮೃಗ ಅತ್ಯಂತ ಪ್ರಿಯ ಮತ್ತು ಪವಿತ್ರವಾಗಿದ್ದು, ಅದನ್ನು ಹತ್ಯೆ ಮಾಡಿರುವ ಸಲ್ಮಾನ್ ಖಾನ್ ಮೇಲೆ ಸೇಡು ತೀರಿಸಿಕೊಳ್ಳಲು ಅವರು ಮುಂದಾಗಿದ್ದರು ಎನ್ನುವ ಸಂಗತಿ ಬಹಿರಂಗವಾಗುತ್ತಲೇ, ಸಲ್ಮಾನ್‌ಗೆ ಭದ್ರತೆ ಹೆಚ್ಚಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.