ಶೋಭಿತಾ ಧುಲಿಪಾಲ ಜೊತೆ ನಾಗ ಚೈತನ್ಯ ಡೇಟಿಂಗ್: ಸಮಂತಾ ಪ್ರತಿಕ್ರಿಯೆ ಹೀಗಿತ್ತು?

ನವದೆಹಲಿ: ನಟಿ ಶೋಭಿತಾ ಧುಲಿಪಾಲ ಅವರೊಂದಿಗೆ ತಮ್ಮ ವಿಚ್ಛೇದಿತ ಪತಿ ನಾಗ ಚೈತನ್ಯ ಡೇಟಿಂಗ್ ಮಾಡುತ್ತಿರುವ ಕುರಿತು ಸಮಂತಾ ಮೌನ ಮುರಿದಿದ್ದಾರೆ.
ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನ ಪಡೆದು 1 ವರ್ಷ ಆಗುತ್ತಿದೆ. ಸದ್ಯ ಇಬ್ಬರೂ ತಮ್ಮದೇ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ನಡುವೆ ಶೋಭಿತಾ ಧುಲಿಪಾಲ ಅವರೊಂದಿಗೆ ನಾಗ ಚೈತನ್ಯ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ವದಂತಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಈ ವಿಚಾರಕ್ಕೆ ಸಂಬಂಧಿಸಿ ನಾಗ ಚೈತನ್ಯ ಅಭಿಮಾನಿಗಳು ಸಮಂತಾ ಅವರ ಹೆಸರನ್ನು ಎಳೆದು ತಂದಿದ್ದರು. ಸದ್ಯ ಈ ಕುರಿತು ಟ್ವೀಟ್ ಮಾಡುವ ಮೂಲಕ ಸಮಂತಾ ಟೀಕಾಕಾರರಿಗೆ ಖಡಕ್ ಉತ್ತರ ನೀಡಿದ್ದಾರೆ.
‘ಹೆಣ್ಣು ಮಕ್ಕಳ ಬಗ್ಗೆ ವದಂತಿ ಹಬ್ಬಿದರೆ ಅದು ನಿಜ ಎನ್ನುತ್ತೀರಿ. ಗಂಡು ಮಕ್ಕಳ ಬಗ್ಗೆ ವದಂತಿ ಹಬ್ಬಿದರೆ ಇದು ಹೆಣ್ಣಿನ ಕೆಲಸ ಎನ್ನುತ್ತೀರಿ. ಇದರಲ್ಲಿ ಭಾಗಿಯಾದವರೇ ಎಲ್ಲವನ್ನು ಬಿಟ್ಟು ಮುಂದೆ ಸಾಗಿದ್ದಾರೆ. ನೀವೂ ಇದನ್ನು ಬಿಟ್ಟು ಮುಂದೆ ಸಾಗಿ. ನಿಮ್ಮ ಕೆಲಸ ನೋಡಿಕೊಳ್ಳಿ, ನಿಮ್ಮ ಕುಟುಂಬದ ಕಡೆ ಗಮನ ನೀಡಿ’ ಎಂದು ಟೀಕಾಕಾರರಿಗೆ ಸಮಂತಾ ತಿರುಗೇಟು ನೀಡಿದ್ದಾರೆ.
Rumours on girl - Must be true !!
Rumours on boy - Planted by girl !!
Grow up guys ..
Parties involved have clearly moved on .. you should move on too !! Concentrate on your work … on your families .. move on!! https://t.co/6dbj3S5TJ6— Samantha (@Samanthaprabhu2) June 21, 2022
ಸಮಂತಾ, ತಮಿಳಿನಲ್ಲಿ ಬಿಡುಗಡೆಯಾದ ‘ಕಾತು ವಾಕುಲಾ ರೆಂಡು ಕಾದಲ್’ನಲ್ಲಿ ಕಾಣಿಸಿಕೊಂಡಿದ್ದರು. ಜತೆಗೆ ‘ಶಾಕುಂತಲಂ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ವಿಜಯ್ ದೇವರಕೊಂಡ ಅಭಿನಯದ ‘ಖುಷಿ’ ಚಿತ್ರದಲ್ಲೂ ಸಮಂತಾ ಅಭಿನಯಿಸುತ್ತಿದ್ದಾರೆ.
ಓದಿ...
ಪಾಕ್: ಹೆರಿಗೆ ವೇಳೆ ಶಿಶು ತಲೆ ಕತ್ತರಿಸಿ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ!
ಐದು ಅಡಿ ಉದ್ದದ ಕೊಳಕ ಮಂಡಲವನ್ನು ನುಂಗಿದ ದೈತ್ಯ ನಾಗರ ಹಾವು: ವಿಡಿಯೊ ವೈರಲ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.