ಭಾನುವಾರ, 11 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕೀಯಿಂಗ್ ಮಾಡುವುದು ಎಷ್ಟು ಕಷ್ಟವಿತ್ತು? ವಿಡಿಯೊ ಸಮೇತ ವಿವರಿಸಿದ ನಟಿ ಸಮಂತಾ

Last Updated 28 ಜನವರಿ 2022, 12:15 IST
ಅಕ್ಷರ ಗಾತ್ರ

ನವದೆಹಲಿ: ಸದ್ಯ ಸುತ್ತಾಟದಲ್ಲಿ ಬ್ಯುಸಿಯಾಗಿರುವ ನಟಿ ಸಮಂತಾ ರುತ್ ಪ್ರಭು ಅವರು, ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಸ್ಕೀಯಿಂಗ್ ತರಬೇತಿ ಪಡೆಯುತ್ತಿರುವ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಸಮಂತಾ, ‘ಸ್ಕೀಯಿಂಗ್ ಕಲಿಯುವ ವೇಳೆ ನೂರಾರು ಬಾರಿ ವಿಫಲವಾಗಿದ್ದು, ಹಲವು ಬಾರಿ ಬಿದ್ದಿದ್ದೇನೆ. ಎದ್ದಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಸ್ಕೀಯಿಂಗ್ ಮಾಡುತ್ತಾ ಮಾಡುತ್ತಾ ಸಮತೋಲನ ತಪ್ಪಿ ಅವರು ಮುಗ್ಗರಿಸಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್‌ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ಕೀಯಿಂಗ್ ತರಬೇತಿ ನೀಡುತ್ತಿರುವ ಕೇಟ್ ಮೆಕ್​ಬ್ರೈಡ್ ಅವರೊಂದಿಗಿನ ಚಿತ್ರ ಹಂಚಿಕೊಂಡಿರುವ ಸಮಂತಾ,‘ಅಂಬೆಗಾಲಿಡುತ್ತಾ ಸ್ಕೀಯಿಂಗ್ ಆರಂಭಿಸಿದೆ. ನೂರಾರು ಬಾರಿ ಬಿದ್ದಿದ್ದೇನೆ. ಪ್ರತೀ ಬಾರಿಯೂ ಸಾವರಿಸಿಕೊಂಡು ಎದ್ದಿದ್ದೇನೆ. ಹಲವು ಬಾರಿ ಸಾಕು ಬಿಟ್ಟುಬಿಡೋಣ ಎನ್ನಿಸಿತ್ತು. ಆದರೆ, ಎಲ್ಲವನ್ನೂ ಎದುರಿಸುವುದನ್ನು ಹೇಳಿಕೊಟ್ಟ ಕೇಟ್‌ ಅವರಿಗೆ ಆಭಾರಿಯಾಗಿದ್ದೇನೆ. ಎಲ್ಲಾ ಬದಲಾವಣೆಗೆ ಕಾರಣ ನೀವು’ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ತೆರೆಕಂಡ ಸುಕುಮಾರ್ ನಿರ್ದೇಶನದ ‘ಪುಷ್ಪ’ ಸಿನಿಮಾದಲ್ಲಿ ಸಮಂತಾ, ಮೊದಲ ಬಾರಿಗೆ ಐಟಂ ಸಾಂಗ್‌ನಲ್ಲಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

‘ಹೂ ಅಂತಿಯಾ ಮಾವ.. ಊ ಊ ಅಂತಿಯಾ’ ಹಾಡಿಗೆ ಸಮಂತಾ ಮೈ ಚಳಿ ಬಿಟ್ಟು ಸೊಂಟ ಬಳುಕಿಸಿದ್ದಾರೆ. ಸಿನಿಮಾ ಗೆಲುವಿನಲ್ಲಿ ಈ ವಿಶೇಷ ಹಾಡು ಪ್ರಮುಖ ಪಾತ್ರ ವಹಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಗುಣಶೇಖರ್ ನಿರ್ದೇಶನದ ‘ಶಾಕುಂತಲಂ’ ಚಿತ್ರದಲ್ಲಿ ಸಮಂತಾ ಕಾಣಿಸಿಕೊಳ್ಳುತ್ತಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT