ಬುಧವಾರ, ಮಾರ್ಚ್ 29, 2023
32 °C

ವಿಚ್ಛೇದನದ ಬಳಿಕ ಹಾಲಿವುಡ್‌ಗೆ ತೆರಳಿದ ಸಮಂತಾ ರುತ್ ಪ್ರಭು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Samantha Ruth Prabhu Instagram Post

ಬೆಂಗಳೂರು: ನಟ ನಾಗ ಚೈತನ್ಯ ಜತೆ ವಿಚ್ಛೇದನ ಪಡೆದುಕೊಂಡ ಬಳಿಕ ಚಿತ್ರರಂಗದಿಂದ ತುಸು ವಿರಾಮ ಪಡೆದಿದ್ದ ನಟಿ ಸಮಂತಾ ರುತ್ ಪ್ರಭು ಮತ್ತೆ ಸಿನಿಮಾ ಕ್ಷೇತ್ರಕ್ಕೆ ಮರಳಿದ್ದಾರೆ.

'ಅರೇಂಜ್‌ಮೆಂಟ್ಸ್ ಆಫ್ ಲವ್' ಎಂಬ ಚೊಚ್ಚಲ ಹಾಲಿವುಡ್ ಚಿತ್ರದಲ್ಲಿ ಸಮಂತಾ ಅವರು ತಮಿಳು ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನಿರ್ದೇಶಕ ಫಿಲಿಪ್ ಜಾನ್ ಜತೆಗೆ ಫೋಟೊ ಒಂದನ್ನು ಸಮಂತಾ ಅವರು ಪೋಸ್ಟ್ ಮಾಡಿದ್ದು, ಹೊಸ ಸಿನಿಮಾದ ಪೋಸ್ಟರ್ ಅನ್ನು ಕೂಡ ಶೇರ್ ಮಾಡಿಕೊಳ್ಳುವ ಮೂಲಕ ಹಾಲಿವುಡ್‌ಗೆ ತೆರಳುತ್ತಿರುವ ಬಗ್ಗೆ ದೃಢಪಡಿಸಿದ್ದಾರೆ.

ಹೊಸ ಜಗತ್ತು, ಹೊಸ ಕೆಲಸಕ್ಕೆ ತೆರೆದುಕೊಳ್ಳುತ್ತಿದ್ದೇನೆ.. ವಿಶೇಷ ಅವಕಾಶವೊಂದು ನನ್ನ ಪಾಲಿಗೆ ಬಂದಿದೆ ಎಂದು ಸಮಂತಾ ಹೇಳಿಕೊಂಡಿದ್ದಾರೆ.

ಭಾರತೀಯ ಮೂಲದ ಲೇಖಕ ತಿಮೇರಿ ಎನ್. ಮುರಾರಿ ಅವರು 2004ರಲ್ಲಿ ಪ್ರಕಟಿಸಿದ್ದ 'ಅರೇಂಜ್‌ಮೆಂಟ್ಸ್ ಆಫ್ ಲವ್' ಕಾದಂಬರಿಯನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು