ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಂತಾ ನಟನೆಯ ‘ಯಶೋದಾ’ ಚಿತ್ರೀಕರಣ ಮುಕ್ತಾಯ

ಜುಲೈ 15ರಿಂದ ಎಲ್ಲ ಭಾಷೆಗಳ ಡಬ್ಬಿಂಗ್‌
Last Updated 11 ಜುಲೈ 2022, 8:10 IST
ಅಕ್ಷರ ಗಾತ್ರ

ಶ್ರೀದೇವಿ ಮೂವೀಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ, ನಟಿ ಸಮಂತಾ ರುತ್‌ಪ್ರಭು ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಯಶೋದಾ’ ಚಿತ್ರೀಕರಣ ಪೂರ್ಣಗೊಂಡಿದ್ದು, ಜುಲೈ 15ರಿಂದ ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಡಬ್ಬಿಂಗ್‌ ಆರಂಭವಾಗಲಿದೆ.

ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ‘ಯಶೋದಾ’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀದೇವಿ ಪ್ರೊಡಕ್ಷನ್‌ನ 14ನೇ ಸಿನಿಮಾ ಇದಾಗಿದ್ದು, ಹರಿ ಮತ್ತು ಹರೀಶ್‌ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಿವಲೆಂಕಾ ಕೃಷ್ಣ ಪ್ರಸಾದ್‌ ಚಿತ್ರದ ನಿರ್ಮಾಪಕರು. ಸಿನಿಮಾ ಬಗ್ಗೆ ಮಾಹಿತಿ ನೀಡಿದ ಶಿವಲೆಂಕಾ, ‘100 ದಿನಗಳಲ್ಲಿ ಈ ಸಿನಿಮಾದ ಚಿತ್ರೀಕರಣ ಮುಗಿಸಿದ್ದೇವೆ. ಒಂದೇ ಹಾಡಿನ ಚಿತ್ರೀಕರಣ ಬಾಕಿ ಉಳಿದಿದೆ. ಬಜೆಟ್‌ ವಿಚಾರವಾಗಿ ಎಲ್ಲಿಯೂ ಹಿಂದುಮುಂದು ನೋಡದೆ, ಕಥೆ ಬೇಡಿದಷ್ಟು ಹೂಡಿಕೆ ಮಾಡಿದ್ದೇವೆ. ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಆರಂಭವಾಗಿದ್ದು, ಜುಲೈ 15ರಿಂದ ಡಬ್ಬಿಂಗ್‌ ಕೆಲಸ ಶುರುವಾಗಲಿದೆ. ಇದರ ಜತೆಗೆ ಬೇರೆ ಭಾಷೆಯ ಡಬ್ಬಿಂಗ್‌ ಕೂಡಾ ಪೂರ್ಣಗೊಳಿಸುವ ಯೋಚನೆ ಇದೆ. ಇದೆಲ್ಲದರ ಜತೆಗೆ, ‘ಯಶೋದಾ’ ಪ್ಯಾನ್‌ ಇಂಡಿಯಾ ಸಿನಿಮಾ ಆಗಿರುವ ಕಾರಣ ಪ್ರಚಾರ ಕೆಲಸಕ್ಕೂ ಚಾಲನೆ ನೀಡಲಿದ್ದೇವೆ’ ಎಂದಿದ್ದಾರೆ.

‘ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯ ಸಿನಿಮಾ ಇದಾಗಿದ್ದು, ಸಾಹಸ ದೃಶ್ಯಗಳೂ ಈ ಚಿತ್ರದಲ್ಲಿವೆ. ಚಿತ್ರವನ್ನು ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಮಾಡಲಿದ್ದೇವೆ. ಶೀಘ್ರದಲ್ಲಿಯೇ ಚಿತ್ರದ ಟೀಸರ್‌ ಮತ್ತು ಹಾಡನ್ನು ಬಿಡುಗಡೆ ಮಾಡಲಿದ್ದೇವೆ’ ಎನ್ನುತ್ತಾರೆ ಶಿವಲೆಂಕಾ.

ಆಗಸ್ಟ್‌ 12ಕ್ಕೆ ಸಿನಿಮಾ ತೆರೆಗೆ ಬರಲಿದೆ. ಚಿತ್ರದಲ್ಲಿ ಸ್ಟಾರ್‌ ನಟರ ದಂಡೇ ಇದೆ. ವರಲಕ್ಷ್ಮೀ ಶರತ್‌ಕುಮಾರ್‌, ಉಣ್ಣಿ ಮುಕುಂದನ್‌, ರಾವ್‌ ರಮೇಶ್‌, ಮುರಳಿ ಶರ್ಮಾ, ಸಂಪತ್‌ ರಾಜ್, ಶತ್ರು, ಮಧುರಿಮಾ, ಕಲ್ಪಿಕಾ ಗಣೇಶ್‌, ದಿವ್ಯಾ ಶ್ರೀಪಾದ್‌, ಪ್ರಿಯಾಂಕಾ ಶರ್ಮಾ ಸೇರಿ ಹಲವರು ತಾರಾಬಳಗದಲ್ಲಿದ್ದಾರೆ. ಮಣಿಶರ್ಮಾ ಸಂಗೀತ ನೀಡಿದ್ದು, ಚಂದ್ರಬೋಸ್‌ ರಾಮಜೋಗಯ್ಯ ಶಾಸ್ತ್ರಿ ಸಾಹಿತ್ಯ, ಎಂ.ಸುಕುಮಾರ್‌ ಛಾಯಾಗ್ರಹಣ ಹಾಗೂ ಮಾರ್ತಾಂಡ್‌ ವೆಂಕಟೇಶ್‌ ಸಂಕಲನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT