ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಪುಷ್ಪ' ಹಾಡು ಕೇಳಿ: ಬೋಲ್ಡ್ ಲುಕ್‌ನಲ್ಲಿ ’ಹೂ ಅಂತಿಯಾ ಮಾಮ' ಅಂದ್ರು ಸಮಂತಾ 

Last Updated 11 ಡಿಸೆಂಬರ್ 2021, 8:02 IST
ಅಕ್ಷರ ಗಾತ್ರ

ಬೆಂಗಳೂರು: ನಟಿ ಸಮಂತಾ ರುತ್ ಪ್ರಭು ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಐಟಂ ಸಾಂಗ್‌ನಲ್ಲಿ ಕಾಣಿಸಿಕೊಂಡಿದ್ದು ಅದರ ಲಿರಿಕಲ್‌ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

ಸಮಂತಾ ಅವರು ‘ಪುಷ್ಪ–ದಿ ರೈಸ್‘ ಚಿತ್ರದ ಪೆಪ್ಪಿ ಸಾಂಗ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದರ ಫೋಟೊ ಒಂದನ್ನು ಚಿತ್ರತಂಡ ಕೆಲ ದಿನಗಳ ಹಿಂದೆ ಟ್ವೀಟ್ ಮಾಡಿತ್ತು.

ಶುಕ್ರವಾರ, ಡಿಸೆಂಬರ್ 10ರಂದು ಐಟಂ ಸಾಂಗ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕನ್ನಡದಲ್ಲಿ ’ಹೂ ಅಂತಿಯಾ ಮಾಮ, ಊ ಹೂ ಅಂತಿಯಾ?’ ಹಾಡು ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿದೆ. ಚಿತ್ರದ ಬಿಡುಗಡೆಗಾಗಿ ಸಿನಿಪ್ರಿಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿದೆ.

ಈ ಹಾಡು ಬಿಡುಗಡೆಯಾಗಿ 17 ಗಂಟೆಗಳಲ್ಲಿ 96 ಲಕ್ಷಕ್ಕೂ (ತೆಲುಗಿನಲ್ಲಿ) ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಇದು ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಿದೆ.

ಡಿ. 17ರಂದು ಅಲ್ಲು ಅರ್ಜುನ್ ಅಭಿನಯದ ಈ ಚಿತ್ರ ದೇಶದಾದ್ಯಂತ ಐದು ಭಾಷೆಗಳಲ್ಲಿ ತೆರೆಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT