ಕನ್ನಡದ ನಟಿ ಸಂಯುಕ್ತಾ ಹೆಗ್ಡೆ ಮತ್ತೆ ಸುದ್ದಿಯಲ್ಲಿದ್ದಾರೆ. ತಾನು ಗಾಯದಿಂದ ಚೇತರಿಸಿಕೊಂಡಿದ್ದೇನೆ ಎಂದು ಅಭಿಮಾನಿಗಳಿಗೆ ಹೇಳಲಿಕ್ಕಾಗಿ ಬಿಕಿನಿ ಧರಿಸಿ ಮಾಡಿರುವ ಡ್ಯಾನ್ಸ್ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು ಸದ್ದು ಮಾಡುತ್ತಿದ್ದಾರೆ.
ಕ್ರೀಂ ಚಿತ್ರದ ಫೈಟಿಂಗ್ ಚಿತ್ರೀಕರಣದ ವೇಳೆ ಅವರು ಗಾಯಗೊಂಡಿದ್ದರು.
‘ಮೂರು ತಿಂಗಳಲ್ಲಿ ಮೊದಲ ಡ್ಯಾನ್ಸ್ ವಿಡಿಯೊ. ನನ್ನ ಚಿಕಿತ್ಸೆ ಪೂರ್ಣಗೊಂಡಿದೆ. ನನ್ನ ತಜ್ಞರು ಚೆನ್ನಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂಬುದಾಗಿ ಸಾಕಷ್ಟು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವುದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.