ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ರೀಂ’ ಟ್ರೈಲರ್‌ ಬಿಡುಗಡೆ

Published 21 ಫೆಬ್ರುವರಿ 2024, 19:04 IST
Last Updated 21 ಫೆಬ್ರುವರಿ 2024, 19:04 IST
ಅಕ್ಷರ ಗಾತ್ರ

‘ಕಿರಿಕ್‌ ಪಾರ್ಟಿ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದ ನಟಿ ಸಂಯುಕ್ತ ಹೆಗ್ಡೆ ನಟನೆಯ ‘ಕ್ರೀಂ’ ಚಿತ್ರದ ಟ್ರೇಲರ್‌  ಬಿಡುಗಡೆಯಾಗಿದೆ. 

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಗ್ನಿ ಶ್ರೀಧರ್ ನಟಿಸಿದ್ದು, ಚಿತ್ರ ಮಾರ್ಚ್ 1ರಂದು ಬಿಡುಗಡೆಯಾಗಲಿದೆ. ಡಿ.ಕೆ.ದೇವೇಂದ್ರ ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್ ಬಸಂತ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಬರೆದಿದ್ದಾರೆ. 

‘ನನಗೆ ಬರವಣಿಗೆಯಲ್ಲಿ ಹೆಚ್ಚು ಆಸಕ್ತಿ. ನಟನೆಯಲ್ಲಿ ಆಸಕ್ತಿ ಇರಲಿಲ್ಲ. ನಿರ್ಮಾಪಕರು ಹಾಗೂ ಹತ್ತಿರದವರ ಒತ್ತಾಯಕ್ಕೆ ನಟಿಸಿದೆ. ‘ಕ್ರೀಂ’ ಎಂದರೆ ಬೀಜಾಕ್ಷರ ಮಂತ್ರ. ಈ ಚಿತ್ರದ ಕಥೆ, ಹಣ ಹಾಗೂ ಅಧಿಕಾರಕ್ಕಾಗಿ ನಡೆಯುವ ಹೆಣ್ಣುಮಕ್ಕಳ ಬಲಿಯನ್ನು ಕುರಿತಾದ ಕಥಾಹಂದರ ಹೊಂದಿದೆ. ಹಲವೆಡೆ ಈ ರೀತಿಯ ಕೃತ್ಯಗಳು ನಡೆಯುತ್ತಲೇ ಇವೆ. ಇಂತಹ ಸೂಕ್ಷ್ಮ ವಿಚಾರವನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ’ ಎಂದರು. 

ಇದು ಅಭಿಷೇಕ್‌ ಅವರ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದೆ. ಐದು ವರ್ಷಗಳ ಬಳಿಕ ಸಂಯುಕ್ತ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದು, ಆ್ಯಕ್ಷನ್‌ ಸೀಕ್ವೆನ್ಸ್‌ನಲ್ಲೂ ಅವರು ಮಿಂಚಿದ್ದಾರೆ. ಅಚ್ಯುತ್‌ ಕುಮಾರ್‌, ಅರುಣ್‌ ಸಾಗರ್‌ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT