ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಣ’ದಲ್ಲಿ ಶ್ರೇಯಸ್‌ ಜೊತೆ ಸಂಯುಕ್ತ ಹೆಜ್ಜೆ

Last Updated 20 ನವೆಂಬರ್ 2021, 14:08 IST
ಅಕ್ಷರ ಗಾತ್ರ

‘ಕಿರಿಕ್‌ ಪಾರ್ಟಿ’ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆ ಇದೀಗ ‘ರಾಣ’ ಚಿತ್ರದಲ್ಲಿ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

‘ಅಧ್ಯಕ್ಷ’, ‘ರನ್ನ’, ‘ಪೊಗರು’ ಚಿತ್ರಗಳನ್ನು ನಿರ್ದೇಶಿಸಿದ ನಂದ ಕಿಶೋರ್‌ ನಿರ್ದೇಶನದಲ್ಲಿ ‘ರಾಣ’ ತೆರೆಯ ಮೇಲೆ ಬರುತ್ತಿದ್ದು, ಈ ಹಾಡಿನಲ್ಲಿ ಶ್ರೇಯಸ್‌ ಕೆ. ಮಂಜು ಜೋಡಿಯಾಗಿ ಸಂಯುಕ್ತ ಕಾಣಿಸಿಕೊಳ್ಳಲಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ಶಿವು ನಿರ್ಮಿಸಿರುವ ಭವ್ಯವಾದ ಸೆಟ್‌ನಲ್ಲಿ ಈ ಹಾಡಿನ ಚಿತ್ರೀಕರಣ ಶೀಘ್ರದಲ್ಲೇ ನಡೆಯಲಿದೆ. ಶಿವು ಭೇರ್ಗಿ ಈ ಹಾಡನ್ನು ಬರೆದಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಶ್ರೇಯಸ್‌ಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ.

ಗುಜ್ಜಲ್ ಪುರುಷೋತ್ತಮ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಅವರ ಸಾಹಸ ನಿರ್ದೇಶನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT